ಜನಸ್ಪಂದನ ನ್ಯೂಸ್, ಕಲಬುರಗಿ : ಕಲಬುರಗಿ ಜಿಲ್ಲೆಯ ಭಾಲ್ಕಿ (Bhalki) ತಾಲೂಕಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬಲಗೈ ಬಂಟ, ಆಪ್ತ ಎನ್ನಲಾದ ಮಾಜಿ ಕಾರ್ಪೋರೇಟರ್ ರಾಜು ಕಪನೂರ್ ಅವರಿಂದ ಗುತ್ತಿಗೆದಾರನಿಗೆ (contractor) ಕೊಲೆ ಬೆದರಿಕೆ ಆರೋಪದ ಹಿನ್ನೆಲೆ ಜೀವ ಬೆದರಿಕೆಯಿಂದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಏಳು ಪುಟಗಳ ಡೆತ್ನೋಟ್ ಬರೆದಿಟ್ಟು (A seven-page death note was written) ಕಟ್ಟಿತೂಂಗಾವ್ ಗ್ರಾಮದ ಗುತ್ತಿಗೆದಾರ ಸಚಿನ್ (26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
Read it : Special news : ಗುಡ್ಡದಂತ ಸಮಸ್ಯೆ ಬಂದರೂ ಎಳ್ಳಷ್ಟು ಹೆದರಿಕೊಳ್ಳದವರಿಗೆ ಧೈರ್ಯ, ವಿಶ್ವಾಸ ಬರೋದೆಲ್ಲಿಂದ.?
ರೈಲ್ವೆ ಟ್ರ್ಯಾಕ್ ನಲ್ಲಿ ಸಚಿನ್ ರುಂಡ- ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇನ್ನು ಡೆತ್ ನೋಟ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ರಾಜು ಕಪನೂರು ವಿರುದ್ಧ ಆರೋಪಗಳನ್ನು ಉಲ್ಲೇಖಿಸಲಾಗಿದೆ.
Read it : ಭಾರತೀಯ ರೈಲ್ವೆ ಇಲಾಖೆಯಲ್ಲಿ 50,000 ಕ್ಕೂ ಹೆಚ್ಚು ಗ್ರೂಪ್ ಡಿ ಹುದ್ದೆಗಳ ನೇಮಕಾತಿ.!
ರಾಜು ಕಪನೂರು ವಿರುದ್ಧ 15 ಲಕ್ಷಕ್ಕೂ ಹೆಚ್ಚು ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, 1 ಕೋಟಿ ರೂ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸದ್ಯ ಪೊಲೀಸರು ಸಚಿನ್ ಮೃತದೇಹವನ್ನು ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಈ ಸಂಬಂಧ ಬೀದರ್ ರೈಲ್ವೆ ಪೊಲೀಸ್ (Bidar Police Station) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.