ಜನಸ್ಪಂದನ ನ್ಯೂಸ್, ಬೆಳಗಾವಿ : ಬಿಜೆಪಿ ಎಂಎಲ್‌ಸಿ ಸಿ. ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ (A case of attempted assault) ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಸುವರ್ಣಸೌಧದಲ್ಲಿ ಸಿ.ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದ ಬಳಕೆ (Use of unconstitutional word) ಆರೋಪ ಕೇಳಿಬಂದ ಬಳಿಕ ಭಾರೀ ಹೈಡ್ರಾಮಾ ನಡೆದಿತ್ತು.
ಇದನ್ನು ಓದಿ : IPhone ಎಗರಿಸಿದ ಮಂಗ ; ಫೋನ್‌ಗಾಗಿ ಯುವತಿ ಮಾಡಿದ್ದೇನು? ವಿಡಿಯೋ ನೋಡಿ.!
ಸೌಧದೊಳಗೆ ನುಗ್ಗಿದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಸಿ.ಟಿ ರವಿ ಅವರ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೇ ಶಾಸಕರ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ (Hirebagewadi Police Station) ಪ್ರಕರಣ ಸಹ ದಾಖಲಾಗಿತ್ತು.
ಇತ್ತ ಶಾಸಕ ಸಿ. ಟಿ ರವಿಯವರು ಖಾನಾಪುರ ಪೊಲೀಸ್ ಠಾಣೆಯಲ್ಲಿ (Khanapur Police Station) ಲಿಖಿತ ದೂರು (Written complaint) ಸಲ್ಲಿಸಿದ್ದರು. ಈ ಪ್ರಕರಣವನ್ನು ಹಿರೇಬಾಗೇವಾಡಿ ಠಾಣೆಗೆ ವರ್ಗಾಯಿಸಲಾಗಿತ್ತು (transferred).
ಇದನ್ನು ಓದಿ : Weather : ನಾಳೆಯಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆಯಿಂದ ಮುನ್ಸೂಚನೆ.!
ಭಾನುವಾರ ಸಿ. ಟಿ ರವಿ ಅವರು ನೀಡಿದ್ದ ಲಿಖಿತ ದೂರಿನ ಪ್ರತಿ ಪೋಸ್ಟ್ ಮೂಲಕ ಪೊಲೀಸರ ಕೈ ಸೇರಿದ ಬೆನ್ನಲ್ಲೇ ಬೆಳಗಾವಿ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.