Sunday, September 8, 2024
spot_img
spot_img
spot_img
spot_img
spot_img
spot_img
spot_img

Weather : ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ : ಈ ಜಿಲ್ಲೆಗಳಲ್ಲಿ ಭಾರಿ ಮಳೆಗಾಳಿ ಮುನ್ಸೂಚನೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಬೆಂಗಳೂರು : ಈ ವರ್ಷ ನೈರುತ್ಯ ಮುಂಗಾರು ಜೂನ್ 2 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮುಂಗಾರು ಆಗಮಿಸಲು ಅನುಕೂಲಕರ ಪರಿಸ್ಥಿತಿಗಳಿವೆ ಎಂದು ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿರುವಂತೆ ಕೇರಳಕ್ಕೆ ಗುರುವಾರ (ಮೇ 30) ಮಾನ್ಸೂನ್ ಆಗಮನದ ಹಿನ್ನೆಲೆಯಲ್ಲಿ ಈ ಪ್ರಕಟಣೆ ಬಂದಿದೆ.

Cinema : ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ.!

ನೈಋತ್ಯ ಅರೇಬಿಯನ್ ಸಮುದ್ರದ ಉಳಿದ ಭಾಗಗಳು, ಪಶ್ಚಿಮ-ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶಗಳು, ಕೇರಳ ಕೆಲವು ಭಾಗಗಳಲ್ಲಿ ನೈಋತ್ಯ ಮುಂಗಾರು ಮುಂದುವರಿದಿದೆ ಎಂದು ಗುರುವಾರ ಕರ್ನಾಟಕಕ್ಕೆ ನೀಡಿರುವ ದೈನಂದಿನ ಐಎಂಡಿ ಹವಾಮಾನ ವರದಿ ತಿಳಿಸಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದ ಪ್ರತ್ಯೇಕ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ನೈಋತ್ಯ ಮುಂಗಾರು ಜೂನ್ 2 ರಂದು ಕರ್ನಾಟಕದ ದಕ್ಷಿಣ ಭಾಗಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ (IMD) ತಿಳಿಸಿದೆ.

ಕಸ ಎಸೆದಿಲ್ಲವೆಂದು ಪತಿಗೆ, ಈ ಹೆಮ್ಮಾರಿ ಪತ್ನಿ ಮಾಡಿದ್ದೇನು ಗೊತ್ತೇ.? Video ನೋಡಿ.!

ಆಗಮಿಸಲಿರುವ ನೈರುತ್ಯ ಮುಂಗಾರು ಜೂನ್ 2 ರಂದು ರಾಯಚೂರು, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಮನಗರ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (30-40 ಕಿಮೀ) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಮಾನ್ಸೂನ್ ಸಾಮಾನ್ಯವಾಗಿ ಇಡೀ ಕರ್ನಾಟಕ ರಾಜ್ಯವನ್ನು ಆವರಿಸಲು 7-10 ದಿನಗಳನ್ನು ತೆಗೆದುಕೊಳ್ಳುತ್ತದೆ. 2023 ರಲ್ಲಿ ಜೂನ್ 11 ರಂದು ಮಾನ್ಸೂನ್ ಆಗಮಿಸಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಮಾನ್ಸೂನ್‌ ಒಂಬತ್ತು ದಿನ ಮುಂಚಿತವಾಗಿ ಆಗಮಿಸುತ್ತಿದೆ. ಕರ್ನಾಟಕ ಸೇರಿದಂತೆ ಬಹುತೇಕ ಎಲ್ಲ ರಾಜ್ಯಗಳಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಎಜೇನ್ಸಿಸ್)

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img