Thursday, April 25, 2024
spot_img
spot_img
spot_img
spot_img
spot_img
spot_img

ಲೋಕಸಭೆ ಚುನಾವಣೆ ; ಅಕ್ರಮವಾಗಿ ಸಾಗಿಸುತ್ತಿದ್ದ 4 ಕೋಟಿಗೂ ಅಧಿಕ ‘ಚಿನ್ನಾಭರಣ’ ಜಪ್ತಿ.!

spot_img

ಜನಸ್ಪಂದನ ನ್ಯೂಸ್, ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಚೆಕ್ ಪೋಸ್ಟ್ ನಲ್ಲಿ (check post) ವಾಹನ ತಪಾಸನೆಯ ವೇಳೆ ಕೋಟ್ಯಾಂತರ ರೂ. ಬೆಲೆಯ ಚಿನ್ನಾಭರಣ ಪತ್ತೆಯಾದ ಘಟನೆ ನಡೆದಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 4 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ಅಧಿಕಾರಿಗಳು ಜಪ್ತಿ (Confiscation) ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ದೂರು ನೀಡಲು ಬಂದ 23ರ ಯುವತಿಯನ್ನು ಬಲೆಗೆ ಬೀಳಿಸಿಕೊಂಡ 53ರ ASI.!

ಸುಮಾರು 4 ಕೋಟಿ 21 ಲಕ್ಷ 92, ಸಾವಿರದ 752 ರೂ. ಮೌಲ್ಯದ ಚಿನ್ನಾಭರಣ ಇದೀಗ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

ಇದೀಗ ಇಷ್ಟು ಮೊತ್ತದ ಚಿನ್ನಾಭರಣವನ್ನು ಎಲ್ಲಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರಿಂದ ತನಿಖೆ (investigation) ನಡೆಯುತ್ತಿದೆ.

ಲೋಕಾಯುಕ್ತ ಬಲೆಗೆ ಬಿದ್ದ 3 ರೂ. ಲಕ್ಷ ಲಂಚ ಕೇಳಿದ ಸರ್ವೇಯರ್.!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕೂಡ ಇತ್ತೀಚಿಗೆ ದಿನಾಂಕವನ್ನು ಘೋಷಿಸಿದ್ದು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.

spot_img
spot_img
spot_img
- Advertisment -spot_img