ಜನಸ್ಪಂದನ ನ್ಯೂಸ್, ಆರೋಗ್ಯ : ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಎಷ್ಟೊಂದು ಅದ್ಭುತ ಪ್ರಯೋಜನಗಳು ಸಿಗುತ್ತವೇ ಗೊತ್ತಾ.?. ಬನ್ನಿ ಆ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ.!
ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರಿಂದ ABC ಜ್ಯೂಸ್ (Apple, Beetroot, Carrot) ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೇಬು, ಬೀಟ್‌ರೂಟ್ ಮತ್ತು ಕ್ಯಾರೆಟ್ ಮಿಶ್ರಣದಿಂದ ತಯಾರಾಗುವ ಈ ಪಾನೀಯವು ರುಚಿಕರವಾಗಿರುವುದರ ಜೊತೆಗೆ ಪೋಷಕಾಂಶಗಳಿಂದ ಕೂಡಿದೆ.
ಇದನ್ನು ಓದಿ : ISRO (LPSC) ದಲ್ಲಿ 10ನೇ ತರಗತಿಯಿಂದ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗವಕಾಶ.!
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಹಲವು ರೀತಿಯ ಆರೋಗ್ಯ ಲಾಭಗಳು ದೊರೆಯುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದ್ರೆ ಯಾವ್ಯಾವ ಪ್ರಯೋಜಗಳು ಸಿಗುತ್ತವೆ ಅಂತ ತಿಳಿಯೋಣ.
ರೋಗನಿರೋಧಕ ಶಕ್ತಿ :
ಸೇಬು ಮತ್ತು ಬೀಟ್‌ರೂಟ್‌ನಲ್ಲಿರುವ ವಿಟಮಿನ್ C ಹಾಗೂ ಕ್ಯಾರೆಟ್‌ನಲ್ಲಿನ ಬೇಟಾ-ಕ್ಯಾರೋಟಿನ್ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೆಚ್ಚಿಸುತ್ತದೆ.
ಇದನ್ನು ಓದಿ : ಪತಿ ಇಲ್ಲದ ವೇಳೆ ಅತ್ತೆ ಮೇಲೆ ಅಮಾನುಷ ಹಲ್ಲೆ ನಡೆಸಿದ ಸೊಸೆ : CCTV ದೃಶ್ಯ ವೈರಲ್.!
ಜೀರ್ಣಕ್ರಿಯೆ ಸುಧಾರಣೆ :
ABC ಜ್ಯೂಸ್‌ನಲ್ಲಿ ಇರುವ ಹೆಚ್ಚಿನ ಫೈಬರ್ ಜೀರ್ಣಾಂಗದ ಚಟುವಟಿಕೆಯನ್ನು ಉತ್ತೇಜಿಸಿ ಮಲಬದ್ಧತೆ ಸಮಸ್ಯೆಯನ್ನು ತಡೆಗಟ್ಟುತ್ತದೆ. ನಿಯಮಿತ ಸೇವನೆ ಕರುಳಿನ ಚಲನೆ ಸುಗಮಗೊಳಿಸುತ್ತದೆ.
ಚರ್ಮದ ಆರೋಗ್ಯಕ್ಕೆ ಲಾಭಕಾರಿ :
ವಿಟಮಿನ್ A ಮತ್ತು C ಜೊತೆಗೆ ಆಂಟಿ-ಆಕ್ಸಿಡೆಂಟ್‌ಗಳು ಚರ್ಮಕ್ಕೆ ಹೊಳಪು ನೀಡುತ್ತವೆ, ವಯಸ್ಸಿನ ಲಕ್ಷಣಗಳನ್ನು ತಗ್ಗಿಸುತ್ತವೆ ಹಾಗೂ ಮೊಡವೆ-ಸುಕ್ಕುಗಳನ್ನು ಕಡಿಮೆ ಮಾಡುತ್ತವೆ.
ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?
ದೇಹದ ನಿರ್ವಿಷೀಕರಣ :
ABC ಜ್ಯೂಸ್ ಯಕೃತ್ತಿನ ಕಾರ್ಯವನ್ನು ಬೆಂಬಲಿಸಿ ಜೀರ್ಣಾಂಗ ವ್ಯವಸ್ಥೆಯಿಂದ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕರಿಸುತ್ತದೆ. ಇದರಿಂದ ದೇಹ ಶುದ್ಧವಾಗಿರಲು ಸಹಾಯವಾಗುತ್ತದೆ.
ತೂಕ ನಿಯಂತ್ರಣ :
ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಹೊಂದಿರುವುದರಿಂದ ಹೊಟ್ಟೆ ತುಂಬಿದ ಭಾವನೆ ದೀರ್ಘಕಾಲ ಉಳಿಯುತ್ತದೆ. ಇದು ಕ್ಯಾಲೋರಿ ಸೇವನೆಯನ್ನು ಕಡಿಮೆಮಾಡಿ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ತೂಕ ಇಳಿಕೆಗೆ ನೆರವಾಗುತ್ತದೆ.
ಇದನ್ನು ಓದಿ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”
ಆರೋಗ್ಯ ತಜ್ಞರ ಸಲಹೆ ಪ್ರಕಾರ, ಪ್ರತಿದಿನ ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹದ ಸಮಗ್ರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಬಹುದು.
ABC juice : ABC juice is a simple yet effective way to infuse nutrients into your diet. Although it is not new to the market, it has recently gained popularity, mainly because it may help fight cancer.
Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.
ISRO (LPSC) ದಲ್ಲಿ 10ನೇ ತರಗತಿಯಿಂದ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗವಕಾಶ.!

ಜನಸ್ಪಂದನ ನ್ಯೂಸ್, ನೌಕರಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯ ಲಿಕ್ವಿಡ್ ಪ್ರಪಲ್ಷನ್ ಸಿಸ್ಟಮ್ಸ್ ಸೆಂಟರ್ (LPSC) ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.
ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!
ಖಾಲಿ ಹುದ್ದೆಗಳ ವಿವರ :
- ವಿಭಾಗ : ISRO – LPSC.
- ಒಟ್ಟು ಹುದ್ದೆಗಳ ಸಂಖ್ಯೆ : 23.
- ಉದ್ಯೋಗ ಸ್ಥಳ : ಬೆಂಗಳೂರು ಮತ್ತು ತಿರುವನಂತಪುರಂ.
- ಅಪ್ಲಿಕೇಶನ್ ವಿಧಾನ : ಆನ್‌ಲೈನ್.
ಹುದ್ದೆಗಳ ಹೆಸರುಗಳು :
-
- ತಾಂತ್ರಿಕ ಸಹಾಯಕ.
- ತಂತ್ರಜ್ಞ.
- ಚಾಲಕ.
ವೇತನ ಶ್ರೇಣಿ :
- ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಕಾನೂನುಬದ್ಧ ವೇತನ ಸೌಲಭ್ಯವಿದ್ದು, ಸಂಬಳ ಶ್ರೇಣಿ ರೂ.19,900/- ರಿಂದ ರೂ.1,42,400/- ರ ವರೆಗೆ ಇರುತ್ತದೆ.
ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?
ವಯೋಮಿತಿ (Age Limit) :
- ಕನಿಷ್ಠ: 18 ವರ್ಷ
- ಗರಿಷ್ಠ: 35 ವರ್ಷ
- ಸರ್ಕಾರದ ನಿಯಮಾನುಸಾರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸಬಹುದು.
ಶೈಕ್ಷಣಿಕ ಅರ್ಹತೆ :
ಅಧಿಕೃತ ISRO (LPSC) ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ಐಟಿಐ, ಡಿಪ್ಲೊಮಾ ಅಥವಾ ಬಿ.ಎಸ್ಸಿ ವಿದ್ಯಾರ್ಹತೆ ಪಡೆದಿರಬೇಕು.
ಇದನ್ನು ಓದಿ : Modelಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದ ಯುವಕ ; ಅನಾಚಾರದ ವಿಡಿಯೋ ವೈರಲ್.!
ಅರ್ಜಿ ಶುಲ್ಕ (Application Fee) :
- ಮಹಿಳಾ, SC/ST, PwBD ಹಾಗೂ ಮಾಜಿ ಸೈನಿಕರು : ಯಾವುದೇ ಶುಲ್ಕವಿಲ್ಲ.
- ಇತರೆ ಅಭ್ಯರ್ಥಿಗಳು : ರೂ.750/-
ಅರ್ಜಿ ಸಲ್ಲಿಸುವ ವಿಧಾನ :
- ಅಧಿಕೃತ ISRO (LPSC) ವೆಬ್‌ಸೈಟ್‌ಗೆ ಭೇಟಿ ನೀಡಿ : lpsc.gov.in.
- ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿಕೊಳ್ಳಿ.
- ಆನ್‌ಲೈನ್ ಅರ್ಜಿ ಲಿಂಕ್‌ನಲ್ಲಿ ಹೋಗಿ.
- ಅಗತ್ಯ ಮಾಹಿತಿಗಳನ್ನು ನಮೂದಿಸಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಶುಲ್ಕ ಪಾವತಿ (ಅನ್ವಯಿಸುತ್ತಿದ್ದರೆ) ಮಾಡಿ.
- ಅರ್ಜಿಯನ್ನು ಪರಿಶೀಲಿಸಿ ಹಾಗೂ ಸಲ್ಲಿಸಿ.
- ಫಾರ್ಮ್‌ನ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಇದನ್ನು ಓದಿ : ಪತಿ ಇಲ್ಲದ ವೇಳೆ ಅತ್ತೆ ಮೇಲೆ ಅಮಾನುಷ ಹಲ್ಲೆ ನಡೆಸಿದ ಸೊಸೆ : CCTV ದೃಶ್ಯ ವೈರಲ್.!
ಮುಖ್ಯ ದಿನಾಂಕಗಳು :
- ಅರ್ಜಿಯ ಪ್ರಾರಂಭ ದಿನಾಂಕ : 12 ಆಗಸ್ಟ್ 2025.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಆಗಸ್ಟ್ 2025.
ಮಹತ್ವದ ಲಿಂಕ್‌ಗಳು :
- 👉 ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ
- 👉 ಅಧಿಕೃತ ವೆಬ್‌ಸೈಟ್ : lpsc.gov.in
- 👉 ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
Note : ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ISRO (LPSC) ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳುವುದು ಅತ್ಯಗತ್ಯ. ಇದರಲ್ಲಿ ಅರ್ಹತೆ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ ಹಾಗೂ ಇತರೆ ನಿಯಮಗಳು ಸ್ಪಷ್ಟವಾಗಿ ನೀಡಲಾಗಿದೆ.
Disclaimer : The above given information is available On online, candidates should check it properly before applying. This is for information only.






