ಜನಸ್ಪಂದನ ನ್ಯೂಸ್, ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ (Gudenahalli cross) ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಶುಕ್ರವಾರ) ಬೆಳ್ಳಂಬೆಳಗ್ಗೆ ಸಂಭವಿಸಿದ್ದು, 10 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 10 ಕ್ಕೂ ಹೆಚ್ಚು ಜನರು ಸಾವನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎನ್ನಲಾಗಿದೆ.
ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ
ಇದನ್ನು ಓದಿ : Astrology : ಜೂನ್ 28ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ವಾಪಾಸಾಗುವಾಗ ಈ ದುರ್ಘಟನೆ ಸಂಭವಿಸಿದೆ.
ಟಿಟಿಯಲ್ಲಿ ಸುಮಾರು 15 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಹೆಚ್ಚನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಇದನ್ನು ಓದಿ : ರೀಲ್ಸ್ ಮಾಡಲು ಹೋಗಿ ರಿಯಲ್ ಆಗಿ ಒದೆ ತಿಂದ ಯುವಕರು ; ನೀವು Video ನೋಡಿ.!
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತ ದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಂತವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾಸ್ಥಳಕ್ಕೆ ಬ್ಯಾಡಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.