ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ರೈತ ಗಲ್ಲಿಯಲ್ಲಿ ಎಳ್ಳು ಬೆಲ್ಲ ಕೊಡಲು ಬಂದಿದ್ದ ಅತ್ತೆಯನ್ನೇ ಚಾಕುವಿನಿಂದ ಇರಿದು ಅಳಿಯನೊಬ್ಬ (Son in law) ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಅತ್ತೆ ರೇಣುಕಾಳನ್ನು (40) ಅಳಿಯ ಶುಭಂ ಬಿರ್ಜೆ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
Read it : Canara ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!.
ಕಳೆದ 3 ವರ್ಷಗಳ ಹಿಂದೆಷ್ಟೇ ಛಾಯಾ ಜತೆಗೆ ಶುಭಂ ಮದುವೆ ಮಾಡಿಕೊಂಡಿದ್ದನು. ಹೀಗಾಗಿ ಅತ್ತೆ ರೇಣುಕಾ ಅವರು ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ (Background of Sankranti festival) ಬೆಳಗ್ಗೆ ತರಹೇವಾರಿ ಅಡುಗೆ ಮಾಡಿಕೊಂಡು ಮಗಳಿಗೆ ಹಬ್ಬದ ಊಟ ನೀಡಬೇಕೆಂದು ದೊಡ್ಡ ಊಟದ ಬುತ್ತಿಯನ್ನು ಸಿದ್ಧಪಡಿಸಿಕೊಂಡು 11 ಗಂಟೆಯ ಸುಮಾರಿಗೆ ಮಗಳ ಮನೆಗೆ ತೆರಳಿದ್ದಾರೆ.
ಆದರೆ ಅಳಿಯ ಶುಭಂ ನೀವೇಕೆ ನಮ್ಮ ಮನೆಗೆ ಬರುತ್ತೀರಿ ಎಂದು ಗಲಾಟೆ ಶುರು ಮಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ವಿಕೋಪಕ್ಕೆ ತಿರುಗಿ (Turn to disaster) ಅತ್ತೆಯ ತೊಡೆಯ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾನೆ.
ತೀವ್ರ ರಕ್ತಸ್ರಾವವಾಗಿ (Severe bleeding) ಬಳಲುತ್ತಿದ್ದ ರೇಣುಕಾ ಅವರನ್ನು ಕೂಡಲೇ ಸ್ಥಳೀಯರು ಸೇರಿಕೊಂಡು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ರೇಣುಕಾ ಅವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
Read it : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ Car ಭೀಕರ ಅಪಘಾತ.!
ಇನ್ನು ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್, ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೇಣುಕಾ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ (Postmortem examination) ಬೆಳಗಾವಿ ಬೀಮ್ಸ್ ಶವಗಾರಕ್ಕೆ ರವಾನಿಸಲಾಗಿದೆ.
ಬೆಳಗಾವಿ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಕೊಲೆಗೆ ಸಂಬಂಧಿಸಿದಂತೆ ಶುಭಂ ಹಾಗೂ ಅವರ ತಂದೆ- ತಾಯಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.