Monday, October 7, 2024
spot_img
spot_img
spot_img
spot_img
spot_img
spot_img
spot_img

ಮುಡಾ ಹಗರಣ : ಲೋಕಾಯುಕ್ತದಲ್ಲಿ CM ಸಿದ್ಧರಾಮಯ್ಯ ವಿರುದ್ಧ FIR ದಾಖಲು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಸುಮಾರು 56 ಕೋಟಿ ರೂ. ಮೌಲ್ಯದ 14 ಬದಲಿ ನಿವೇಶನಗಳನ್ನು ಪಡೆದಿರುವ ಪ್ರಕರಣಕ್ಕೆ ಸಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮೋದನೆಯನ್ನು ಹೈ ಕೋರ್ಟ್ ಎತ್ತಿಹಿಡಿಯಿತು.

ಸಿಎಂ ವಿರುದ್ಧ ತನಿಖೆಗೆ ನೀಡಿದ ಆದೇಶ ಕುರಿತು ನಿನ್ನೆ ಹೈಕೋರ್ಟ್ ಮಹತ್ವದ ತೀರ್ಪಿನ ನಂತರ ಈ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಮಹತ್ವದ ಆದೇಶ ಹೊರಬಿದ್ದಿದ್ದು, ಲೋಕಾಯುಕ್ತ ತನಿಖೆಗೆ ಆದೇಶ ನೀಡಿದೆ.

ಕೋರ್ಟ್ ಆದೇಶದಂತೆ ಸಿಎಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಅವರ ಪತ್ನಿ ಪಾರ್ವತಿ ಎ. 2 ಆರೋಪಿಯಾಗಿದ್ದಾರೆ. ಸಿದ್ಧರಾಮಯ್ಯ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೇ, ಎ.4 ಆರೋಪಿಯನ್ನಾಗಿ ಭೂ ಮಾಲೀಕ ದೇವರಾಜು ಹಾಗೂ ಇತರರು ಎ5 ಆರೋಪಿಯಾಗಿದ್ದಾರೆ.

ಈ ಕುರಿತು ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ಅವರ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img