ಜನಸ್ಪಂದನ ನ್ಯೂಸ್, ಬೆಂಗಳೂರು : ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತೆ ಮತ್ತಷ್ಟು ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ.
ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುವುದಾಗಿ ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆಂದು ಹೇಳಲಾದ ಸಂತ್ರಸ್ತ ಮಹಿಳೆ ಹೇಳಿದ್ದಾರೆ.
ಇದನ್ನು ಓದಿ : ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ FIR ದಾಖಲು.!
ಬೆಂಗಳೂರಿನ ರಾಜಭವನ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮುನಿರತ್ನ ಬಳಿ ಮಾಜಿ ಮುಖ್ಯಮಂತ್ರಿಗಳ ವಿಡಿಯೋ ಇದೆ. ಆ ವಿಡಿಯೋ ತೋರಿಸಿ ಬ್ಲ್ಯಾಕ್ಮೇಲ್ ಮಾಡಿ ಮುನಿರತ್ನ ಮಂತ್ರಿಯಾದರು.
ಮುನಿರತ್ನ ಅವರ ಬಳಿ ಅಡ್ವಾನ್ಸ್ ಕ್ಯಾಮೆರಾಗಳಿವೆ. ಆ ಕ್ಯಾಮೆರಾಗಳನ್ನು ಬಳಸಿ ಬೇರೆ ಮಹಿಳೆಯರನ್ನು ಬಳಸಿಕೊಂಡು ಇಬ್ಬರು ಮಾಜಿ ಮುಖ್ಯಮಂತ್ರಿಗಳ ಹನಿಟ್ರ್ಯಾಪ್ ಮಾಡಿ ಪೆನ್ಡ್ರೈವ್ ಅನ್ನು ಇಟ್ಟುಕೊಂಡಿದ್ದಾರೆ.
ಇದನ್ನು ಓದಿ : Special news : ನಿಮ್ಮ ಬಳಿ 100 ರೂ. ಹಳೆ ನೋಟು ಇದ್ದರೆ ನೀವಾಗಬಹುದು ಲಕ್ಷಾಧಿಪತಿ.!
ಇದರಲ್ಲಿ ಯಾವುದೇ ಸಿನಿಮಾ ನಟಿಯರು ಇಲ್ಲ. ಇನ್ನು ಹನಿಟ್ರ್ಯಾಪ್ಗೆ ಬಳಸಿಕೊಳ್ಳಲಾದ ಸುಮಾರು ಐದಾರು ಸಂತ್ರಸ್ತ ಮಹಿಳೆಯರು ಹೆದರಿಕೊಂಡು ಸುಮ್ಮನಾಗಿದ್ದಾರೆ. ಅವರು ಕೂಡ ನನ್ನಂತೆಯೇ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು.
ಅನೇಕ ಮಹಿಳೆಯರನ್ನು ಶಾಸಕ ಮುನಿರತ್ನ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಲವು ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲು ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ : ಆರೋಗ್ಯದ ದೃಷ್ಟಿಯಿಂದ ರಾತ್ರಿ ಒಳ ಉಡುಪು ಧರಿಸಿ ಮಲಗುವುದು ಸರಿಯೇ.?
2020ರಲ್ಲಿ ಬಿಜೆಪಿ ಶಾಸಕ ಮುನಿರತ್ನ ಪರಿಚಯವಾಗಿದ್ದರು. ಶಾಸಕ ಮುನಿರತ್ನ ನನಗೆ ವಿಡಿಯೋ ಕರೆ ಕೂಡ ಮಾಡಿದ್ದಾರೆ. ಒಂದು ದಿನ ಗೋದಾಮಿನ ಬಳಿ ಕರೆದುಕೊಂಡು ಹೋಗಿ ಅಲ್ಲಿ ನನ್ನನ್ನು ಹೆದರಿಸಿ ಅತ್ಯಾಚಾರ ಮಾಡಿದ್ದಾರೆ. ಅವರು ಜಾಮೀನು ಪಡೆದು ಬಂದ ಮೇಲೆ ನನಗೆ ಜೀವ ಭಯ ಇದೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ.
ಅಲ್ಲದೇ ಇದೀಗ ಮಾಜಿ ಮುಖ್ಯಮಂತ್ರಿಗಳೊಬ್ಬರನ್ನು ಹನಿಟ್ರ್ಯಾಪ್ ಮಾಡಿರುವ ಆರೋಪ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವ ಸಾಧ್ಯತೆ ಇದೆ.