Wednesday, May 22, 2024
spot_img
spot_img
spot_img
spot_img
spot_img
spot_img

Murder case : ಕರ್ತವ್ಯ ಲೋಪ ಹಿನ್ನೆಲೆ ಇನ್ಸ್‌ಪೆಕ್ಟರ್, ಮಹಿಳಾ ಸಿಬ್ಬಂದಿ ಸಸ್ಪೆಂಡ್.!

spot_img

ಜನಸ್ಪಂದನ ನ್ಯೂಸ್, ಹುಬ್ಬಳ್ಳಿ : ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಓರ್ವ ಮಹಿಳಾ ಸಿಬ್ಬಂದಿಯನ್ನು ಅಮಾನತು ಮಾಡಿ ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಆದೇಶ (ordered) ಹೊರಡಿಸಿದ್ದಾರೆ.

ಕರ್ತವ್ಯ ಲೋಪ (dereliction of duty) ಆರೋಪದ ಹಿನ್ನೆಲೆ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್ ಚಂದ್ರಶೇಖರ ಬಿ.ಚಿಕ್ಕೋಡಿ, ಕಾನ್ಸ್​ಟೇಬಲ್ ರೇಖಾ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಇದನ್ನು ಓದಿ : Crime : ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ.!

ಕೊಲೆಯಾದ ಅಂಜಲಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ ಅಜ್ಜಿ ಬೆಂಡಿಗೇರಿ ಠಾಣೆಗೆ ದೂರು ನೀಡಿದ್ದರು. ದೂರು (complaint) ನೀಡಿದ್ದರೂ ಪೊಲೀಸರು ನಿರ್ಲಕ್ಷಿಸಿದ್ದ ಆರೋಪ ಕೇಳಿಬಂದಿತ್ತು.

ಹೀಗಾಗಿ ಇಬ್ಬರು ಸಿಬ್ಬಂದಿಗಳನ್ನು ಅಮಾನತು (suspended) ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಇದನ್ನು ಓದಿ : ಕೆನ್ನೆಗೆ ಬಾರಿಸಿದ ಶಾಸಕನಿಗೆ ತಿರುಗಿಸಿ ತಾನೂ ಹೊಡೆದ ಮತದಾರ ; Video Viral.!

ಇನ್ನೂ ಆರೋಪಿ ವಿಶ್ವ ಒಂದು ವಾರದ ಹಿಂದೆಯೇ ಅಂಜಲಿಗೆ ಜೀವ ಬೆದರಿಕೆ ಹಾಕಿದ್ದು, ನನ್ನ ಜೊತೆ ಬರದೇ ಹೋದರೆ ನೇಹಾ ತರ ಕೊಲೆ ಮಾಡುತ್ತೇನೆ ಎಂದು ಎಚ್ಚರಿಕೆ ಸಹ ನೀಡಿದ್ದ ಎನ್ನಲಾಗಿದೆ.

ಇದರಿಂದ ಗಾಬರಿಯಲ್ಲಿದ್ದ ಅಂಜಲಿ ಕುಟುಂಬಸ್ಥರು ಬೆಂಡಿಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಪೊಲೀಸರು ಅಂಜಲಿ ಕುಟುಂಬಸ್ಥರಿಗೆ ಬೈದು ನಿಮ್ಮದು ಮೂಢನಂಬಿಕೆ (superstition) ಹಾಗೇನು ಆಗಲ್ಲ ಹೋಗಿ ಅಂತ ನಿರ್ಲಕ್ಷ್ಯ ತೋರಿಸಿದ್ದರು. ಆ ಹಿನ್ನೆಲೆ ಇದೀಗ ಅವರನ್ನು ಅಮಾನತ್ತು ಮಾಡಲಾಗಿದೆ.

spot_img
spot_img
spot_img
- Advertisment -spot_img