ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಹರಿಯುವ ಕೃಷ್ಣಾ ನದಿಯಲ್ಲಿ ಬರೋಬ್ಬರಿ 11 ತಿಂಗಳ ಹಿಂದೆ ವ್ಯಕ್ತಿಯೊಬ್ಬರನ್ನು ಮುಳುಗಿಸಿ ಕೊಲೆ ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಹಾರೂಗೇರಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.
ಇಂದು (ದಿ.04) ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಶಂಕರ ಗುಳೇದ ಅವರು ಈ ಬಗ್ಗೆ ಮಾಹಿತಿ ನೀಡಿದರು.
ಇದನ್ನು ಓದಿ : GT : ದೇವಸ್ಥಾನದ ಹತ್ತಿರ ಮಾಜಿ ಉಪ ಮುಖ್ಯಮಂತ್ರಿ ಮೇಲೆ ಗುಂಡಿನ ದಾಳಿ.!
2023 ರ ಡಿಸೆಂಬರ್ 27 ರಂದು ಕೃಷ್ಣಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಈ ನಡುವೆ ರಾಯಬಾಗ ತಾಲೂಕಿನ ಇಟ್ನಾಳ ಗ್ರಾಮದ ಯುವಕನೊಬ್ಬ ಕಾಣೆಯಾಗಿದ್ದ. ಆದರೆ ಆತನ ಬಗ್ಗೆ ಯಾವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ ಎಂದು ತಿಳಿಸಿದರು.
ಪೊಲೀಸರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ತನಿಖೆ ನಡೆಸಿದರು. ಕೊನೆಗೂ ಅದು ಇಟನಾಳ ಗ್ರಾಮದ ಯುವಕನ ಶವ ಎನ್ನುವುದು ಗೊತ್ತಾಯಿತು. ಯುವಕನ ಪತ್ನಿ, ಆಕೆಯ ಪ್ರಿಯಕರ, ಹಾಗೂ ಇನ್ನೊಬ್ಬ ಸೇರಿ ಕೃಷ್ಣಾ ನದಿಯಲ್ಲಿ ಯುವಕನನ್ನು ಮುಳುಗಿಸಿ ಕೊಲೆಗೈದಿದ್ದರು ಎನ್ನುವುದು ಪೊಲೀಸ್ ತನಿಖೆಯಲ್ಲಿ ಸಾಬೀತುಗೊಂಡಿದೆ.
ಇದನ್ನು ಓದಿ : Gram ಪಂಚಾಯಿತಿಯ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ.!
ಒಂದೂವರೆ ವರ್ಷದ ಹಿಂದೆ ಯುವಕನ ಪತ್ನಿ ಕಾಣೆಯಾದ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯುವಕನ ಪತ್ನಿ ಓರ್ವನೊಂದಿಗೆ ಓಡಿ ಹೋಗಿದ್ದು, ಯುವಕನಿಗೆ ಗೊತ್ತಾಗಿದೆ.
ಕೆಲದಿನಗಳ ನಂತರ ಪತ್ನಿ ಮನೆಗೆ ವಾಪಸ್ ಬಂದಿದ್ದಳು. ಓಡಿ ಹೋಗಿದ್ದ ವಿಷಯಕ್ಕೆ ಸಂಬಂಧ ಪಟ್ಟಂತೆ ದಂಪತಿಗಳ ನಡುವೆ ದಿನವೂ ಗಲಾಟೆಯಾಗುತ್ತಿತ್ತು. ತನ್ನ ಪತ್ನಿಯ ಸಹ ಸಂಗ ಬಿಡುವಂತೆ ಪತ್ನಿಯ ಪ್ರಿಯಕರನಿಗೆ, ಯುವಕ ಎಚ್ಚರಿಕೆ ಕೊಟ್ಟಿದ್ದ.
ಕೊನೆಗೂ ಪತಿಗೆಯೇ ಗತಿ ಕಾಣಿಸಲು ಮುಂದಾದ ಪತ್ನಿ, ತನ್ನ ಪ್ರಿಯಕರ ಹಾಗು ಇನ್ನೊಬ್ಬನ ನೆರವಿನೊಂದಿಗೆ ಕಳೆದ ವರ್ಷದ ಡಿಸೆಂಬರ್ ನಲ್ಲಿ ಮಲ್ಲಪ್ಪನನ್ನು ಕೃಷ್ಣಾ ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾರೆ ಎಂದು ತಿಳಿಸಿದರು.
ಹಿಂದಿನ ಸುದ್ದಿ : Gram ಪಂಚಾಯಿತಿಯ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ.!
ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಯಲಹಂಕ (Yalahanka) ತಾಲೂಕಿನ ಹೆಸರುಘಟ್ಟ ಹೋಬಳಿಯ ಶಿವಕೋಟಿ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ಹೆಸರುಘಟ್ಟ ಹೋಬಳಿಯ ಶಿವಕೋಟಿ ಗ್ರಾಮ ಪಂಚಾಯಿತಿಯ (Gram Panchayat) ಬಿಲ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪ್ರದೀಪ್ ಎಂಬುವವರು ಲೋಕಾಯುಕ್ತ ಅಧಿಕಾರಿಗಳ (Lokayukta Officer’s) ಕೈಗೆ ಸಿಕ್ಕಿಬಿದ್ದಿದ್ದಾರೆ.
ಇದನ್ನು ಓದಿ : Health : ಬೆಳಿಗ್ಗೆ ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ?
ವ್ಯಕ್ತಿಯೊಬ್ಬರ ಬಳಿ 13 ಸಾವಿರ ರೂ.ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು (Demanded bribe), ಆ ಹಣವನ್ನು ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಿವಕೋಟೆ ಗ್ರಾಮ ಪಂಚಾಯಿತಿ (Shivkote Gram Panchayat) ವ್ಯಾಪ್ತಿಯಲ್ಲಿ ವ್ಯಕ್ತಿಯು ತಂದೆಯ ಹೆಸರಿನಲ್ಲಿ ಖಾಲಿ ನಿವೇಶನವಿದ್ದು, ನಿವೇಶನಕ್ಕೆ ಈ- ಖಾತಾ ಮತ್ತು ಮ್ಯೂಟೇಷನ್ ವರ್ಗಾವಣೆ (E- Account and Mutation Transfer) ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು.
ಈ ಕೆಲಸವನ್ನು ಮಾಡಿಕೊಡಲು ಬಿಲ್ ಕಲೆಕ್ಟರ್ (bill collector) ಪ್ರದೀಪ್ ರವರು 13 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಇದನ್ನು ಓದಿ : KKRTC : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಅಂತೆಯೇ ಲಂಚದ ಹಣವನ್ನು ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣದ ಸಮೇತ ಬಿಲ್ ಕಲೆಕ್ಟರ್ ಪ್ರದೀಪ್ ರವರನ್ನು ಅರೆಸ್ಟ್ ಮಾಡಿ (Arrested with money) ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸ್ ಅಧೀಕ್ಷಕರಾದ ಪವನ್ ನೆಟ್ಟೂರು ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ರವರಾದ ರಮೇಶ್ ಮತ್ತು ಸಿಬ್ಬಂದಿ ವರ್ಗದವರು ಈ ಕಾರ್ಯಾಚರಣೆ ನಡೆಸಿದರು.