ಜನಸ್ಪಂದನ ನ್ಯೂಸ್, ಮೈಸೂರು : ಮೈಸೂರು (Mysuru) ನಲ್ಲಿ ಅಪ್ರಾಪ್ತ (Minor) ಬಾಲಕಿಯರ ಶೋಷಣೆ (ವೇಶ್ಯಾವಾಟಿಕೆಗೆ) ಪ್ರಕರಣ ಬಯಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಠಾಣೆ ಪೊಲೀಸರು ನಡೆಸಿದ ವಿಶೇಷ ದಾಳಿಯಲ್ಲಿ “ಶೋಭಾ ಮತ್ತು ತುಳಸಿಕುಮಾರ್” ಎನ್ನುವವರು ವಶಕ್ಕಾಗಿದ್ದಾರೆ.
ಅಪ್ರಾಪ್ತ (Minor) ಬಾಲಕಿ ಜೊತೆ ಮೊದಲ ಲೈಂಗಿಕ ಸಂಪರ್ಕಕ್ಕೆ ಬರೋಬ್ಬರಿ 20 ಲಕ್ಷ ರೂಪಾಯಿ ರೇಟ್ ಫಿಕ್ಸ್ ಮಾಡಿ ಬೇಡಿಕೆ ಇಟ್ಟಿದ್ದರು. ಈ ವಿಷಯದ ಕುರಿತು ಮಕ್ಕಳ ಹಕ್ಕು ರಕ್ಷಣೆಗೆ ಕೆಲಸ ಮಾಡುತ್ತಿರುವ ಒಡನಾಡಿ ಸಂಸ್ಥೆ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
Prostitution : ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ : 4 ಜನರ ಬಂಧನ.!
ಆರೋಪಿಗಳು ಸಾಮಾಜಿಕ ಜಾಲತಾಣ ಮತ್ತು ಮೆಸೇಜಿಂಗ್ ಆಪ್‌ಗಳ ಮೂಲಕ ಅಪ್ರಾಪ್ತ (Minor) ಬಾಲಕಿಯರ ವಿಡಿಯೋಗಳನ್ನು ತೋರಿಸಿ, ಗ್ರಾಹಕರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಪ್ರಕ್ರಿಯೆಯಲ್ಲಿ 12-13 ವರ್ಷದ ಅಪ್ರಾಪ್ತ (Minor) ಬಾಲಕಿಯರನ್ನೇ ಗುರಿಯಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಅಪ್ರಾಪ್ತ (Minor) ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಮತ್ತು ಕುಟುಂಬದ ವಶಕ್ಕೆ ಹಸ್ತಾಂತರಿಸಲಾಗಿದೆ.
Elderly : ಮಹಿಳೆಯನ್ನು ಎತ್ತಿಕೊಂಡು ‘ಕೆಂಡ ಹಾಯಲು’ ಹೋಗಿ ಬಿದ್ದ ವೃದ್ಧ.!
ಮಕ್ಕಳ ಶೋಷಣೆ ವಿರೋಧಿ ಕಾಯ್ದೆಯಡಿ (POCSO Act) ಪ್ರಕರಣ ದಾಖಲಿಸಲಾಗಿದ್ದು, ಇಬ್ಬರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗುತ್ತಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
👉 ಮೈಸೂರು ಪೊಲೀಸರ ಈ ಕಾರ್ಯಾಚರಣೆ ಮಕ್ಕಳ ಶೋಷಣೆ ವಿರೋಧಿ ಹೋರಾಟದಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ಸಾಮಾಜಿಕ ಸಂಸ್ಥೆಗಳು ಪ್ರತಿಕ್ರಿಯಿಸಿವೆ.
ನರ್ಸಿಂಗ್ ವಿದ್ಯಾರ್ಥಿನಿ ಅಪಹರಣ, Sexual assault ಪ್ರಕರಣ ; ಒಬ್ಬ ಆರೋಪಿ ಬಂಧನ, ಇನ್ನೊಬ್ಬನಿಗಾಗಿ ಶೋಧ”.!
ಜನಸ್ಪಂದನ ನ್ಯೂಸ್, ಹಾವೇರಿ : ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನಲ್ಲಿ ಅಘಾತಕಾರಿ ಘಟನೆ ಒಂದು ಬೆಳಕಿಗೆ ಬಂದಿದೆ. ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ (Sexual assault) ಎಸಗಿದ ಘಟನೆ ಹಿನ್ನೆಲೆಯಲ್ಲಿ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣದಲ್ಲಿ ಇಬ್ಬರು ಯುವಕರ ವಿರುದ್ಧ ದೂರು ದಾಖಲಿಸಲಾಗಿದ್ದು, ಒಬ್ಬ ಆರೋಪಿ ಬಂಧನಕ್ಕೊಳಗಾಗಿದ್ದಾನೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
“Post Officeನ ಈ ಸ್ಕೀಮ್‌ನಿಂದ ತಿಂಗಳಿಗೆ 9,250 ರೂ.ವರೆಗೂ ನಿಯಮಿತ ಆದಾಯ”.!
ಘಟನೆಯ ಹಿನ್ನಲೆ :
ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 15 ರಂದು ಮಧ್ಯಾಹ್ನ 3:30ರ ಸುಮಾರಿಗೆ ಪ್ಯಾರಾ ಮೆಡಿಕಲ್ ಕೋರ್ಸ್‌ನ ಮೊದಲನೇ ವರ್ಷದ ವಿದ್ಯಾರ್ಥಿನಿ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಆರೋಪಿಗಳಾದ ಅಭಿಷೇಕ್ ಮತ್ತು ಪ್ರವೀಣ ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದರು ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಲವಂತವಾಗಿ ಅಪಹರಿಸಿ, ದೂರದ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ (Sexual assault) ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Elderly : ಮಹಿಳೆಯನ್ನು ಎತ್ತಿಕೊಂಡು ‘ಕೆಂಡ ಹಾಯಲು’ ಹೋಗಿ ಬಿದ್ದ ವೃದ್ಧ.!
ವಿದ್ಯಾರ್ಥಿನಿಯ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಳ್ಳಲು ಆ Sexual assault ದೃಶ್ಯವನ್ನು ವಿಡಿಯೋ ರೂಪದಲ್ಲಿ ದಾಖಲೆ ಮಾಡಿದ್ದರು. ಒಂದು ವೇಳೆ ಸಹಕರಿಸದಿದ್ದರೆ ಆರೋಪಿಗಳು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿ ವಿದ್ಯಾರ್ಥಿನಿಯನ್ನು ಮೌನವಾಗಿರಲು ಒತ್ತಾಯಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯ ನಂತರ, ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಈ ವಿಷಯವನ್ನು ಯಾರಿಗೂ ಹೇಳಬಾರದು ಎಂದು ಒತ್ತಾಯಿಸಲಾಗಿತ್ತು. ಆದರೆ, ಧೈರ್ಯ ಮಾಡಿದ ವಿದ್ಯಾರ್ಥಿನಿ ನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
Pulmonary Edema : ಎಚ್ಚರಿಕೆ ನೀಡುವ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ.!
ಪೊಲೀಸರು ಕೈಗೊಂಡ ಕ್ರಮ :
ದೂರು ದಾಖಲಿಸಿಕೊಂಡ ತಡಸ ಠಾಣೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಗಳ ಪೈಕಿ ಅಭಿಷೇಕ್ ಎಂಬಾತನನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಪ್ರವೀಣ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಜಾರಿಯಲ್ಲಿದೆ. ಆರೋಪಿಗಳ ವಿರುದ್ಧ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ (Sexual assault) ಸೇರಿದಂತೆ ಗಂಭೀರ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ.
ಜನರಲ್ಲಿ ಆತಂಕ, ಕಠಿಣ ಕ್ರಮಕ್ಕೆ ಆಗ್ರಹ :
ಈ ಘಟನೆ ಹಾವೇರಿ ಜಿಲ್ಲೆಯ ಜನತೆಯಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಕಾಲೇಜಿಗೆ ತೆರಳುವ ವಿದ್ಯಾರ್ಥಿನಿಯರ ಸುರಕ್ಷತೆ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ. ಸಾರ್ವಜನಿಕರು Sexual assault ಎಸಗಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ಪೊಲೀಸರು ಕೂಡ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಹೃದಯವಿದ್ರಾವಕ ಘಟನೆ : School ಅಡುಗೆ ಮನೆಯಲ್ಲಿ ಕುದಿಯುತ್ತಿರುವ ಹಾಲಿಗೆ ಬಿದ್ದ ಬಾಲಕಿ.!
ಈ ಘಟನೆ ಮತ್ತೆ ವಿದ್ಯಾರ್ಥಿನಿಯರ ಸುರಕ್ಷತೆ, ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆ ಮತ್ತು ಸಮಾಜದಲ್ಲಿ ಮಹಿಳೆಯರ ವಿರುದ್ಧ ನಡೆಯುವ ದೌರ್ಜನ್ಯಗಳನ್ನು (Sexual assault) ತಡೆಯುವ ಅಗತ್ಯದ ಕುರಿತು ಚರ್ಚೆಗೆ ಕಾರಣವಾಗಿದೆ.