ಬುಧವಾರ, ಫೆಬ್ರವರಿ 11, 2026

Janaspandhan News

HomeCrime Newsಎನ್‌ಎಚ್-66ರಲ್ಲಿ ಭೀಕರ ರಸ್ತೆ ಅಪಘಾತ: ಆರು ವಿದ್ಯಾರ್ಥಿಗಳಿದ್ದ ಕಾರು ಪಲ್ಟಿ.
spot_img

ಎನ್‌ಎಚ್-66ರಲ್ಲಿ ಭೀಕರ ರಸ್ತೆ ಅಪಘಾತ: ಆರು ವಿದ್ಯಾರ್ಥಿಗಳಿದ್ದ ಕಾರು ಪಲ್ಟಿ.

ಜನಸ್ಪಂದನ ನ್ಯೂಸ್‌, ಉಡುಪಿ : ಉಡುಪಿ ಜಿಲ್ಲೆ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಡಿವೈಡರ್ ದಾಟಿ, ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದು ಬಿದ್ದಿದೆ. ಅಪಘಾತದ ವೇಳೆ ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಗಾಯಗೊಂಡ ಎಲ್ಲಾ ವಿದ್ಯಾರ್ಥಿಗಳು ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರು ಎನ್ನಲಾಗಿದೆ.

ಒಟ್ಟು 12 ಮಂದಿ ವಿದ್ಯಾರ್ಥಿಗಳು ಜನವರಿ 31ರಂದು ಎರಡು ಕಾರುಗಳಲ್ಲಿ ದೇಶ ಸುತ್ತುವ ಪ್ರವಾಸಕ್ಕೆ ಹೊರಟಿದ್ದು, ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದ ಸಂದರ್ಭದಲ್ಲೇ ಈ ದುರ್ಘಟನೆ ಸಂಭವಿಸಿದೆ.

ಭೀಕರ ರಸ್ತೆ ಅಪಘಾತ:

ಮಧ್ಯಾಹ್ನ ವೇಳೆಗೆ ಕಾರು ತೆಕ್ಕಟ್ಟೆ ಸಮೀಪದ ಕನ್ನುಕೆರೆ ಪ್ರದೇಶದಲ್ಲಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಏಕಾಏಕಿ ಡಿವೈಡರ್ ಹಾರಿ, ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಪಲ್ಟಿಯಾಗಿದ್ದು, ಪ್ರಯಾಣಿಕರು ಒಳಗೇ ಸಿಲುಕಿಕೊಂಡಿದ್ದರು.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಧಾವಿಸಿ, ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಗಾಯಗೊಂಡ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನು ಓದಿ : ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಅಪಘಾತ ; 6 ಜನರ ಸಾವಿನ ಶಂಕೆ.

ಅಪಘಾತದ ಮಾಹಿತಿ ಪಡೆದ ಕೋಟ ಪೊಲೀಸ್ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.


Disclaimer : ಈ ಸುದ್ದಿಯಲ್ಲಿನ ಮಾಹಿತಿಯನ್ನು ಲಭ್ಯವಿರುವ ಪ್ರಾಥಮಿಕ ವರದಿಗಳು ಹಾಗೂ ವಿಶ್ವಾಸಾರ್ಹ ಮೂಲಗಳ ಆಧಾರದ ಮೇಲೆ ಪ್ರಕಟಿಸಲಾಗಿದೆ. ಅಧಿಕೃತ ಮಾಹಿತಿ ಬಂದ ಬಳಿಕ ವಿವರಗಳಲ್ಲಿ ಬದಲಾವಣೆ ಸಾಧ್ಯವಿದೆ. ಈ ಕುರಿತು ವೆಬ್‌ಸೈಟ್ ಯಾವುದೇ ಕಾನೂನು ಹೊಣೆಗಾರಿಕೆ ವಹಿಸುವುದಿಲ್ಲ.

Janaspandhan News
Janaspandhan Newshttp://WWW.janaspandhan.com
Janaspandana News is a digital news platform that reports crime and local news from Karnataka.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments