Friday, October 18, 2024
spot_img
spot_img
spot_img
spot_img
spot_img
spot_img
spot_img

NLC Recruitment 2024 : ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ (Neyveli Lignite Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NLC Recruitment 2024).

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : ಅಂಚೆ ಕಛೇರಿಯಲ್ಲಿ 40,000ಕ್ಕೂ ಅಧಿಕ ನೇಮಕಾತಿ : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.!

ಹುದ್ದೆಗಳ ವಿವರ  : ಎಕ್ಸಿಕ್ಯೂಟಿವ್‌ ಆಪರೇಷನ್‌ – 24 ಮತ್ತು ಎಕ್ಸಿಕ್ಯೂಟಿವ್‌ ಮೈಂಟೆನೆನ್ಸ್‌ – 12 ಹುದ್ದೆಗಳಿವೆ.

ವಿದ್ಯಾರ್ಹತೆ :
* ಎಕ್ಸಿಕ್ಯೂಟಿವ್‌-ಆಪರೇಷನ್‌ ಹುದ್ದೆಗೆ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ * ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
* ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌ ಹುದ್ದೆಗೆ ಸಿವಿಲ್/ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/     * ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಹರು.

ಅರ್ಜಿ ಶುಲ್ಕ : ಅರ್ಜಿ ಶುಲ್ಕವಾಗಿ ಮಾಜಿ ಯೋಧರು / ಎಸ್‌ಸಿ / ಎಸ್‌ಟಿ ವರ್ಗಕ್ಕೆ ಸೇರಿದವರು 354 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವಿಭಾಗದವರು 854 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ಮಾರ್ಗ ಅನುಸರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ : ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮಾಸಿಕ ವೇತನ : ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : Special news : ಮದುವೆಯಾಗದೇ ಏಕಾಂಗಿ ಜೀವನ ನಡೆಸಲು ಇಷ್ಟ ಪಡುತ್ತಾರೆ ಈ 4 ರಾಶಿಯವರು.!

ಅರ್ಜಿ ಸಲ್ಲಿಸುವ ವಿಧಾನ :

  • ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೊಂದಾಯಿಸಿ.
  • NLC Executive Apply Online ಆಯ್ಕೆ ಕ್ಲಿಕ್‌ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊಗಳನ್ನು ಸೂಚಿಸಿದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ. ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

 ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು :

  • ಫೋಟೊ ಹೈ ಕ್ವಾಲಿಟಿಯಲ್ಲಿದ್ದು, 2023ರ ಅಕ್ಟೋಬರ್‌ 1ರ ಬಳಿಕ ತೆಗೆದಿರಬೇಕು.
  • ಅತ್ಯುತ್ತಮ ಕ್ಲಾಲಿಟಿಯ ಅಭ್ಯರ್ಥಿಯ ಸಹಿಯ ಫೋಟೊ.
  • ಹುಟ್ಟಿದ ದಿನಾಂಕವನ್ನು ಖಾತರಿಪಡಿಸುವ ದಾಖಲೆ.
  • ಎಸ್ಸೆಸ್ಸೆಲ್ಸಿ / ಶೈಕ್ಷಣಿಕ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ನ ಪ್ರತಿ.
  • ಜಾತಿ ಸರ್ಟಿಫಿಕೆಟ್‌.
  • ಮಾಜಿ ಯೋಧರಾಗಿದ್ದರೆ ಅದರ ದಾಖಲೆ.
  • ಫೋಟೊ ಮತ್ತು ಸಹಿಯ ಫೋಟೊ JPEG ಫಾರ್ಮಾಟ್‌ನಲ್ಲಿರಬೇಕು.
  • ದಾಖಲೆಗಳು, ಡಾಕ್ಯುಮೆಂಟ್‌ JPEG ಅಥವಾ PDF ಫಾರ್ಮಾಟ್‌ನಲ್ಲಿರುವುದು ಕಡ್ಡಾಯ.

ಇದನ್ನು ಓದಿ : Health : ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯೋಕ್ಕಿಂತ ಮುಂಚೆ ನೀರು ಕುಡಿದರೆ ಏನಾಗುವುದು ಗೊತ್ತೇ.?

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ. 

ಇಂದೇ (ಮೇ 20) ಕೊನೆಯ ದಿನವಾಗಿದ್ದು, ಸಂಜೆ 5 ಗಂಟೆಯೊಳಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಬೇಕು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img