Sunday, September 8, 2024
spot_img
spot_img
spot_img
spot_img
spot_img
spot_img
spot_img

ಉಡುಗೊರೆ ಬೇಡ ; ಮೋದಿಗೆ ಮತ ನೀಡಿ ಎಂದು ವೆಡ್ಡಿಂಗ್​ ಕಾರ್ಡ್’ನಲ್ಲಿ ಲೋಕಸಭೆ ಚುನಾವಣೆ ಪ್ರಚಾರ ; ಪೋಟೋ ವೈರಲ್.

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikamaglore) ವಿಭಿನ್ನವಾದ ಮದುವೆಯ ಆಮಂತ್ರಣ ಪತ್ರಿಕೆಯೊಂದು ಸಖತ್‌ ವೈರಲ್‌ ಆಗುತ್ತಿದೆ.

ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ತಮ್ಮ ತಂಗಿಯ (Sister) ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಮತ ಹಾಕುವಂತೆ ಕೇಳಿಕೊಂಡಿದ್ದಾರೆ.

ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶಶಿ ಆಲ್ದೂರು ಎನ್ನುವವರು ತಮ್ಮ ತಂಗಿ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ (Invitation card) ಮುಂಬರುವ ಲೋಕಸಭೆ ಚುನಾವಣೆ ಪ್ರಚಾರ ಮಾಡಿದ್ದಾರೆ.

ವಧು ವರರಿಗೆ ಉಡುಗೊರೆ ಬೇಡ, ಬದಲಾಗಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಮತನೀಡಿ (Vote), ಮಕ್ಕಳ ಭವಿಷ್ಯ ಪ್ರಧಾನಿ ಮೋದಿಯಿಂದ ಮಾತ್ರ ಸುಭದ್ರ, ಅದುವೇ ವಧು ವರರಿಗೆ ನೀಡುವ ದೊಡ್ಡ ಉಡುಗೊರೆ (Gift) ಎಂದು ಬರೆದುಕೊಂಡಿದ್ದಾರೆ.

ಈ ಆಮಂತ್ರಣ ಪತ್ರಿಕೆಯು ಶಶಿ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇಲಿರುವ ಪ್ರೀತಿ ಹಾಗೂ ಬಿಜೆಪಿ ಪಕ್ಷದ ಮೇಲಿರುವ ನಿಯತ್ತು ತೋರಿಸುತ್ತದೆ.

ಇನ್ನೂ ಬಿಜೆಪಿ ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿ ಮದುವೆಯ ಆಮಂತ್ರಣ ಪತ್ರಿಕೆ ಫೋಟೋವನ್ನು ವೈರಲ್‌ (Viral) ಮಾಡುತ್ತಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img