ಜನಸ್ಪಂದನ ನ್ಯೂಸ್, ಡೆಸ್ಕ್ : ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬಿಹಾರದಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಅತ್ಯಾಚಾರ ಮಾಡಲು ಯತ್ನಿಸಿದವರಲ್ಲಿ ಒಬ್ಬರು ವೈದ್ಯರಾಗಿದ್ದು, ಸಂಸ್ಥೆಯ ನಿರ್ವಾಹಕರೂ ಆಗಿದ್ದಾರೆ. ನರ್ಸ್ ಅವರ ಖಾಸಗಿ ಭಾಗವನ್ನು ಬ್ಲೇಡ್ನಿಂದ ಕೊಯ್ದು ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.
ಇದನ್ನು ಓದಿ : Special news : ರಾತ್ರಿ ಮಲಗುವ ಮುನ್ನ ಒಂದು ಎಸಳು ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ.?
ಮುಸ್ರಿಘರಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಾಪುರದ ಆರ್ಬಿಎಸ್ ಹೆಲ್ತ್ ಕೇರ್ ಸೆಂಟರ್ನಲ್ಲಿ ರಾತ್ರಿ ನರ್ಸ್ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದರು.
ಈ ವೇಳೆ ಆಡಳಿತಾಧಿಕಾರಿ ಡಾ. ಸಂಜಯ್ ಕುಮಾರ್, ಸುನಿಲ್ ಕುಮಾರ್ ಗುಪ್ತಾ ಹಾಗೂ ಅವಧೇಶ್ ಕುಮಾರ್ ಮೂವರು ಮದ್ಯಪಾನ ಮಾಡಿ ಅತ್ಯಾಚಾರವೆಸಗಲು ಯತ್ನಿಸಿದ್ದರು ಎಂದು ವರದಿ ತಿಳಿಸಿದೆ.
ಇದನ್ನು ಓದಿ : ಅತ್ತೆ ಹೊಡೆದಿದ್ದಾರೆ ಎಂದು ಸಹಾಯವಾಣಿ ಕೇಂದ್ರಕ್ಕೆ Call ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್; ಮುಂದೆನಾಯ್ತು ಗೊತ್ತಾ.?
ಸಂಜಯ್ ಹಾಗೂ ಇತರರ ಹಿಡಿತದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ನರ್ಸ್ ವೈದ್ಯನ ಗುಪ್ತಾಂಗಕ್ಕೆ ಬ್ಲೇಡ್ನಿಂದ ಸೀಳಿದ್ದಾರೆ. ಬಳಿಕ ಕಾಮುಕರಿಂದ ತಪ್ಪಿಸಿಕೊಂಡ ನರ್ಸ್ ಆಸ್ಪತ್ರೆಯ ಹೊರಗಿರುವ ಮೈದಾನದಲ್ಲಿ ಅಡಗಿ ಕುಳಿತು ಪೊಲೀಸರಿಗೆ ಕರೆ ಮಾಡಿದ್ದರು.
ಪೊಲೀಸರ ತಂಡ ಆಸ್ಪತ್ರೆಗೆ ಆಗಮಿಸಿದ್ದು, ನರ್ಸ್ ಸುರಕ್ಷಿತವಾಗಿದ್ದಾರೆಂದು ತಿಳಿಸಿದ್ದಾರೆ. ವೈದ್ಯ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.