Sunday, September 8, 2024
spot_img
spot_img
spot_img
spot_img
spot_img
spot_img
spot_img

ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಕೇಂದ್ರಿಯ ರೇಷ್ಮೆ ಮಂಡಳಿ (Central Silk Board) ಯಲ್ಲಿ ಖಾಲಿ ಇರುವ ಸೈಂಟಿಸ್ಟ್ ಬಿ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ವಿವಿಧ ವಿಭಾಗಗಳ ಒಟ್ಟು 122 ಸೈಂಟಿಸ್ಟ್ ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ಓದಿರಿ.

ಕೇಂದ್ರಿಯ ರೇಷ್ಮೆ ಮಂಡಳಿ (Central Silk Board) ಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಕೊಡಲಾಗಿದೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್‌ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಅತಿಯಾದ s*x ಗೆ ಒತ್ತಾಯ ; ಬೇಸತ್ತ ಯುವಕ ಆಂಟಿಗೆ ಮಾಡಿದ್ದೇನು ಗೊತ್ತಾ.?

ಹುದ್ದೆಗಳ ವಿವರ :

  • ಇಲಾಖೆ/ಸಂಸ್ಥೆ : ಕೇಂದ್ರೀಯ ರೇಷ್ಮೆ ಮಂಡಳಿ.
  • ಹುದ್ದೆಗಳ ಹೆಸರು : ಸೈಂಟಿಸ್ಟ್ ‘ಬಿ’ ಹುದ್ದೆಗಳು.
  • ಹುದ್ದೆಗಳ ಸಂಖ್ಯೆ : 122 ಹುದ್ದೆಗಳು.
  • ಕೆಲಸದ ಸ್ಥಳ : ಬೆಂಗಳೂರು.

ವೇತನ ಶ್ರೇಣಿ :

  • ಮೂಲವೇತನ ರೂ. 56100-177500.
  • ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಇತರೆ ಸೌಲಭ್ಯಗಳು ದೊರೆಯುತ್ತವೆ.

ಶೈಕ್ಷಣಿಕ ಅರ್ಹತೆಗಳು :

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ/ ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ (Master Degree in Science/ Master Degree in Agricultural Sciences) ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ನೌಕಾಪಡೆಯ ಎರಡು ಹೆಲಿಕಾಪ್ಟರ್ ನಡುವೆ ಡಿಕ್ಕಿಯಾಗಿ ಪತನ : 10 ಮಂದಿ ಸಾವು : ಅಪಘಾತದ ಭಯಾನಕ ವಿಡಿಯೋ ವೈರಲ್.!

ಅರ್ಜಿ ಶುಲ್ಕ :

  • ಸಾಮಾನ್ಯ ವರ್ಗ : ರೂ. 1900/-
  • ಓಬಿಸಿ & EWS : ರೂ. 1800/-
  • ಪಜಾ/ಪಪಂ/ತೃತೀಯ ಲಿಂಗಿ/ವಿಕಲಚೇತನ : ರೂ. 975/-
  • ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

ವಯೋಮಿತಿ/Age limit :

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ :

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ (SC/ST) : 05 ವರ್ಷ.

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ.

ಅಂಗವಿಕಲ (PWD) : ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ :

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ :

ಆಸಕ್ತರು ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.csb.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ನೀರಿನಿಂದ ಹೊರಬಂದು ಒದ್ದಾಡುತ್ತಿದ್ದ ಮೀನನ್ನು ರಕ್ಷಿಸಿದ ಕೊಕ್ಕರೆ ; ಅದ್ಹೇಂಗೆ? ಈ Video ನೋಡಿ.!

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 11-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-05-2024

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ ಭಾರತೀಯನ “ಹಕ್ಕು” ಮತ್ತು “ಕರ್ತವ್ಯ”ವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img