Thursday, September 19, 2024
spot_img
spot_img
spot_img
spot_img
spot_img
spot_img
spot_img

ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಗ್ರೂಪ್ A & B ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ನೇಮಿಸಿಲೊಳ್ಳಲು ಪ್ರಕಟಣೆ ಹೊರಬಿದ್ದಿದೆ. ದೇಶದ ವಿವಿಧ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 9995 ಗ್ರೂಪ್ ಎ & ಬಿ  ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವೂ  ಈ ಲೇಖನದಲ್ಲಿ ಪಡೆಯಬಹುದಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : Morning ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ.?

ಹುದ್ದೆಗಳ ವಿವರ :

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಮಲ್ಟಿ ಟಾಸ್ಕಿಂಗ್ ಸ್ಟಾಫ್/ ಆಫೀಸ್ ಅಸಿಸ್ಟೆಂಟ್ 5585
ಆಫೀಸರ್ ಸ್ಕೇಲ್ 1 3499
ಆಫೀಸರ್ ಸ್ಕೇಲ್ 2 773
ಆಫೀಸರ್ ಸ್ಕೇಲ್ 3 129

ವೇತನ :

ಆಫೀಸರ್ ಸ್ಕೇಲ್ 1 – 51000-58000
ಆಫೀಸರ್ ಸ್ಕೇಲ್ 2 – 48170-69800
ಕಛೇರಿ ಸಹಾಯಕ – 21000-48000

ಈ ವೇತನದ ಜೊತೆಗೆ DA/HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.

ಅರ್ಜಿ ಶುಲ್ಕ :

  • ಸಾಮಾನ್ಯ/OBC/EWS ಅರ್ಹತಾ ಅಭ್ಯರ್ಥಿಗಳಿಗೆ : ರೂ. 850/-
  • ಪ.ಜಾ/ಪಪಂ/ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 175/-
  • ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್‌ಲೈನ್ ಮುಖಾಂತರ ಪಾವತಿ ಮಾಡಬಹುದು.

ಇದನ್ನು ಓದಿ : ಅಂಚೆ ಇಲಾಖೆಯಲ್ಲಿ ಬೃಹತ್‌ ನೇಮಕಾತಿ ; 50,000ಕ್ಕೂ ಹೆಚ್ಚಿನ ಹುದ್ದೆಗೆ ಅರ್ಜಿ ಆಹ್ವಾನ.!

ಶೈಕ್ಷಣಿಕ ಅರ್ಹತೆಗಳು :

ದಿನಾಂಕ 01-06-2024 ರ ಒಳಗಾಗಿ ಯಾವುದೇ ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ (Any Degree) ಪದವಿ ಉತ್ತೀರ್ಣ ಹೊಂದಿರಬೇಕು. ಯಾವುದೇ ಅನುಭವ ಬೇಕಾಗಿಲ್ಲ.

ಆಯ್ಕೆವಿಧಾನ : 

  • ಪೂರ್ವಭಾವಿ ಪರೀಕ್ಷೆ (Preliminary Examination).
  • ಮುಖ್ಯ ಪರೀಕ್ಷೆ (Mains Exam).

(ಪೂರ್ವಭಾವಿ & ಮುಖ್ಯ ಪರೀಕ್ಷೆಯು ಕನ್ನಡ, ಇಂಗ್ಲೀಷ್ & ಹಿಂದಿ ಸೇರಿದಂತೆ ವಿವಿಧ ಸ್ಥಳೀಯ ಭಾಷೆಗಳಲ್ಲಿ ನಡೆಯಲಿದ್ದು, ತಾವು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಯ್ಕೆಮಾಡಬಹುದು.)

ಅರ್ಜಿ ಹಾಕುವ ವಿಧಾನ :

ಈ  ನೇಮಕಾತಿಗಾಗಿ ONLINE ಅರ್ಜಿಗಳನ್ನು ದಿನಾಂಕ 07.06.2024 ರಿಂದ 27.06.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IBPS ನ  ವೆಬ್‌ಸೈಟ್ www.ibps.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ  ಹಾಕಿ.

ಇದನ್ನು ಓದಿ : ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.!

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್‌ 07, 2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್‌ 27, 2024.
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್‌ 27, 2024. 

ಪ್ರಮುಖ ಲಿಂಕುಗಳು :

Disclaimer : All information provided here is for reference purpose only. While we try to list all the jobs for the convenience of teenager, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img