Sunday, September 8, 2024
spot_img
spot_img
spot_img
spot_img
spot_img
spot_img
spot_img

ಲೋಕಾಯುಕ್ತ ಬಲೆಗೆ ಬಿದ್ದ ಪಂಚಾಯತ್ ರಾಜ್ AEE.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಾಪುರ (Khanapur) ತಾಲ್ಲೂಕಿನಲ್ಲಿ ಸ್ಥಳೀಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಸ್ಥಳೀಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದುರದುಂಡೇಶ್ವರ ಮಹಾದೇವ ಬನ್ನೂರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ (Lokayukta trap) ಎನ್ನಲಾಗಿದೆ.

ದೂರು ನೀಡಲು ಬಂದ 23ರ ಯುವತಿಯನ್ನು ಬಲೆಗೆ ಬೀಳಿಸಿಕೊಂಡ 53ರ ASI.!

ತಮ್ಮ ಕಚೇರಿಯಲ್ಲೇ (office) ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರಿಂದ ₹27.75 ಲಕ್ಷ ಲಂಚ ಪಡೆಯುವ ವೇಳೆ ಲೋಕಾಯುಕ್ತರು ದಾಳಿ (raid) ನಡೆಸಿದ್ದಾರೆ.

ನೀಲಾವಡೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 2ನೇ ವಾರ್ಡಿನಲ್ಲಿ ನರೇಗಾ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತಾಂತ್ರಿಕ ಅನುಮೋದನೆ ನೀಡುವಂತೆ ಕೋರಿ ಆನ್‌ಲೈನ್ ಮೂಲಕ ಪ್ರಸ್ತಾವ ಸಲ್ಲಿಸಲಾಗಿತ್ತು.

ರಾತ್ರಿ Mobile ಚಾರ್ಜ್ ಇಟ್ಟು ಮಲ್ಕೊತೀರಾ.? : ಹಾಗಿದ್ರೆ ಈ ಸುದ್ದಿ ಓದಿ.!

ಈ ಕುರಿತು ಬನ್ನೂರ ಅವರು ನೀಲಾವಡೆ ಗ್ರಾಮ ಪಂಚಾಯ್ತಿ ಸದಸ್ಯ ವಿನಾಯಕ ಮುತಗೇಕರ ಎಂಬುವರ ಬಳಿ ₹27.75 ಲಕ್ಷ ಲಂಚಕ್ಕೆ ಬೇಡಿಕೆ (demand) ಇಟ್ಟಿದ್ದರು.

ಈ ವಿಚಾರವನ್ನು ವಿನಾಯಕ ಅವರು ಬೆಳಗಾವಿಯ ಲೋಕಾಯುಕ್ತ ಪೊಲೀಸರ ಗಮನಕ್ಕೆ ತಂದಿದ್ದರು. ಸದ್ಯ ಆರೋಪಿಯನ್ನು ಲಂಚದ ಹಣದ ಸಮೇತ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img