ಜನಸ್ಪಂದನ ನ್ಯೂಸ್, ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಹೊರವಲಯದಲ್ಲಿ ತಲೆಗೆ ಗಾಯವಾಗಿ ರಕ್ತ ಸುರಿಯುತ್ತಿದ್ದರೂ ಸರ್ಕಾರಿ ನೌಕರರು (Government Employees) ಕೈಯಲ್ಲಿ ಬಿಯರ್ ಬಾಟಲ್ ಹಿಡಿದುಕೊಂಡು ಬಡಿದಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿದೆ.
ಕೆಪಿಟಿಸಿಎಲ್ ಜೂನಿಯರ್ ಎಂಜಿನಿಯರ್ಗಳಾದ ಶ್ರೀನಿವಾಸ್, ವಾದಿರಾಜ್, ಬೆಸ್ಕಾಂ ಸಿಬ್ಬಂದಿ ನರಸಿಂಹಮೂರ್ತಿ ಮತ್ತು ಸಂತೋಷ್ ನಡುವೆ ಹಣಾಹಣಿ ನಡೆದಿದೆ.
ಇದನ್ನು ಓದಿ : ಮಹಿಳೆ ಮೇಲೆ ನಿರಂತರ ಅತ್ಯಾಚಾರ ; Video ವೈರಲ್ ಮಾಡಿ ಗ್ರಾ. ಪಂ. ಅಧ್ಯಕ್ಷೆಯ ಮಗನಿಂದ ವಿಕೃತಿ.!
ಪಾವಗಡ (Pavagada) ತಾಲೂಕಿನ ಕೆಪಿಟಿಸಿಎಲ್ (KPTCL) ಎಂಜಿನಿಯರ್’ಗಳು ಈ ರೀತಿ ಹೊಡೆದಾಡಿಕೊಂಡಿದ್ದಾರೆ.
ಕೆಪಿಟಿಸಿಎಲ್ನ ಇಬ್ಬರು ಜೂನಿಯರ್ ಎಂಜಿನಿಯರ್ಗಳು, ಇಬ್ಬರು ಬೆಸ್ಕಾಂ ಸಿಬ್ಬಂದಿಯ ನಡುವೆ ಬಡಿದಾಟ ನಡೆದಿದೆ.
ಸದ್ಯ ಘಟನೆಯ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಪಾವಗಡ ಪಟ್ಟಣದ ಹೊರವಲಯದಲ್ಲಿ ಕಳೆದ ಗುರುವಾರ ನಾಲ್ವರು ನೌಕರರು ಕರ್ತವ್ಯ ಹಾಜರಾಗದೇ ಎಣ್ಣೆ ಪಾರ್ಟಿ ಮಾಡಿಕೊಂಡಿದ್ದರು. ಈ ವೇಳೆ ಪಾರ್ಟಿ ಮಧ್ಯೆ ಮಾತಿಗೆ ಮಾತು ಬೆಳೆದು ತೀವ್ರವಾಗಿ ಬಡಿದಾಡಿಕೊಂಡಿದ್ದಾರೆ. ಬಟ್ಟೆ ಬಿಚ್ಚಿಕೊಂಡು ಬೀದಿ ರೌಡಿಗಳಂತೆ ಕಾಳಗ ನಡೆಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗ್ತಿದೆ.
ಇದನ್ನು ಓದಿ : ಭಜನೆ ಮಾಡ್ತಿದ್ದ ಮಹಿಳೆಯರ ಮುಂದೆಯೇ ಅಂಡರ್‌ವೇರ್‌ನಲ್ಲೇ ಕುಳಿತ ಸಬ್ ಇನ್ಸ್‌ಪೆಕ್ಟರ್ ; Video Viral.!
ಇನ್ನೂ ಘಟನೆಯ ಕುರಿತು ಈವರೆಗೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಕೆಲಸಕ್ಕೆ ಕುತ್ತು ಬರಬಹುದು ಎಂಬ ಭೀತಿಯಿಂದ ಗಾಯದ ನೋವಿನಲ್ಲೇ ನಾಲ್ವರೂ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ನಾಲ್ವರಿಗೂ ಮೇಲಾಧಿಕಾರಿಗಳು ನೋಟಿಸ್ ಕೊಟ್ಟಿದ್ದು, ಕಾರಣ ಕೇಳಿದ್ದಾರೆ.