ಜನಸ್ಪಂದನ ನ್ಯೂಸ್, ಕೋಟ : ಮಂಗಳೂರು ಜಿಲ್ಲೆಯ ಸಾಸ್ತಾನ ಟೋಲ್ ಗೇಟ್ ಸಮೀಪ ಭಾನುವಾರ (ಆಗಸ್ಟ್ 24) ಬೆಳಗಿನ ಜಾವ ನಡೆದ ರಸ್ತೆ ಅಪಘಾತದಲ್ಲಿ ಇಲಕಲ್‌ನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ (KSRTC) ಬಸ್‌ನ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಬೆಳಿಗ್ಗೆ ಸುಮಾರು 4.30ರ ವೇಳೆಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್‌ನಿಂದ 500 ಮೀಟರ್ ಹಿಂದಿನ ಭಾಗದಲ್ಲಿದ್ದ ಸೂಚನಾ ಫಲಕಕ್ಕೆ ಬಸ್ ಢಿಕ್ಕಿ ಹೊಡೆದಿದೆ.
Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
KSRTC ಬಸ್ಸಿನಲ್ಲಿ ಒಟ್ಟು 36 ಮಂದಿ ಪ್ರಯಾಣಿಕರು ಇದ್ದು, ಅವರಲ್ಲಿ 12 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರಲ್ಲಿ ಒಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಬಸ್ ಡಿಕ್ಕಿಯು ತೀವ್ರತೆಯಿಂದ ಇದ್ದರೂ ಸಹ KSRTC ಬಸ್ ಚಾಲಕ, ನಿರ್ವಾಹಕ ಹಾಗೂ ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?
KSRTC ಬಸ್ ಅಪಘಾತದ ಗಾಯಾಳುಗಳನ್ನು ತಕ್ಷಣ ಕೋಟ ಜೀವನ್ ಮಿತ್ರ ಹಾಗೂ ಟೋಲ್ ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಕೆ.ಎಸ್.ಆರ್.ಟಿ.ಸಿ (KSRTC) ಬಸ್ ಅಪಘಾತವಾದ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!
ಜನಸ್ಪಂದನ ನ್ಯೂಸ್, ನೌಕರಿ : ಬೆಂಗಳೂರು ಮೂಲದ ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF) 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ KSCCF ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ KSCCF ವೆಬ್‌ಸೈಟ್ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.
KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!
ನೇಮಕಾತಿ ವಿವರಗಳು :
- ಇಲಾಖೆ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF).
- ಒಟ್ಟು ಹುದ್ದೆಗಳು : 34.
- ಹುದ್ದೆಗಳ ಹೆಸರು : ಮಾರಾಟ ಸಹಾಯಕ ಮತ್ತು ಇತರೆ ಹುದ್ದೆಗಳು.
- ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ.
- ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
- ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.12,500 ರಿಂದ ರೂ.29,600/- ವರೆಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ.
ವಯೋಮಿತಿ :
- ಕನಿಷ್ಠ ವಯಸ್ಸು : 18 ವರ್ಷ.
- ಗರಿಷ್ಠ ವಯಸ್ಸು : 35 ವರ್ಷ.
KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
ಅರ್ಜಿ ಶುಲ್ಕ :
- SC/ST/ಪ್ರವರ್ಗ-I/PWD ಅಭ್ಯರ್ಥಿಗಳು : ರೂ.500/-
- ಇತರೆ ಎಲ್ಲಾ ಅಭ್ಯರ್ಥಿಗಳು : ರೂ.1000/-
ಶೈಕ್ಷಣಿಕ ಅರ್ಹತೆ :
- ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / 10ನೇ ತರಗತಿ, ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಪದವಿ ಪೂರೈಸಿರಬೇಕು.
ಆಯ್ಕೆ ವಿಧಾನ :
- ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ KSCCF ಅಧಿಕೃತ ಅಧಿಸೂಚನೆಯ ಪ್ರಕಾರ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ :
- ಅಧಿಕೃತ KSCCF ವೆಬ್‌ಸೈಟ್‌ಗೆ ಭೇಟಿ ನೀಡಿ.
- ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
- ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
- ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ.
- ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯವಿದ್ದರೆ ಮಾತ್ರ).
- ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ (Printout) ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
- ಅರ್ಜಿ ಪ್ರಾರಂಭ ದಿನಾಂಕ : 16 ಆಗಸ್ಟ್ 2025.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
ಪ್ರಮುಖ ಲಿಂಕ್‌ಗಳು :
- ಅಧಿಸೂಚನೆ (PDF) : [ಇಲ್ಲಿ ಕ್ಲಿಕ್ ಮಾಡಿ]
- ಅರ್ಜಿಗಾಗಿ ಲಿಂಕ್ : [ಇಲ್ಲಿ ಕ್ಲಿಕ್ ಮಾಡಿ]
- ಅಧಿಕೃತ KSCCF ವೆಬ್‌ಸೈಟ್ : virtualofficeerp.com
👉 Disclaimer : The above given information is available On online, candidates should check it properly before applying. This is for information only.