Saturday, July 27, 2024
spot_img
spot_img
spot_img
spot_img
spot_img
spot_img

Lokasabha election : ಮತದಾನದ ವೇಳೆ ಕಲ್ಲಿನಿಂದ ಹೊಡೆದ ಜನರು ; ಎದ್ದು ಬಿದ್ದು ಓಡಿದ ಅಭ್ಯರ್ಥಿ.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯ ಮೇಲೆ ಏಕಾಏಕಿ (suddenly) ಹಲ್ಲೆ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಜಾರ್​ಗ್ರಾಮ್ ಎಂಬಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಬಿಜೆಪಿ ಅಭ್ಯರ್ಥಿ ಪ್ರಣತ್ ತುಡು ಎಂಬುವವರ ಮೇಲೆ ಈ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಇದನ್ನು ಓದಿ : ತಾಳಿ ಕಟ್ಟಿದ ಬಳಿಕ ವಧುವಿಗೆ ಮುತ್ತಿಟ್ಟ ವರ : ರಣರಂಗವಾಯ್ತು ಮದುವೆ ಮಂಟಪ.!

ಭದ್ರತಾ ಸಿಬ್ಬಂದಿಯು ಅವರಿಗೆ ಭದ್ರತೆ (security) ಒದಗಿಸಿದರೂ, ಕೆಲ ದುಷ್ಕರ್ಮಿಗಳು ಅವರನ್ನು ಬೆನ್ನತ್ತಿ, ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಸದ್ಯ ಪ್ರಣತ್‌ ತುಡು, ಭದ್ರತಾ ಸಿಬ್ಬಂದಿ ಹಾಗೂ ಪತ್ರಕರ್ತರು ಓಡಿ ಹೋಗುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಘಟನೆಯ ಕುರಿತು ಬಿಜೆಪಿ ಆಕ್ರೋಶ (Outrage) ವ್ಯಕ್ತಪಡಿಸಿದ್ದು, ಇದೆಲ್ಲ ಟಿಎಂಸಿ ಕೃತ್ಯ ಎಂದು ದೂರಿದೆ.

ಇನ್ನೂ ಬಿಜೆಪಿ ನಾಯಕ ಅಮಿತ್‌ ಮಾಳವೀಯ ಅವರು ಕಲ್ಲು ತೂರಾಟದ ವಿಡಿಯೋವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಟಿಎಂಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : 2 ವರ್ಷದಿಂದ ಲೈಂಗಿಕ ಕ್ರಿಯೆ ನಡೆಸಿಲ್ಲ ಎಂದು SI ಪತಿಯ ವಿರುದ್ಧ ಠಾಣೆಯ ಮುಂದೆ ಪತ್ನಿಯ ಪ್ರತಿಭಟನೆ.!

ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು (Democracy) ಕೊಲೆ ಮಾಡುತ್ತಿದ್ದಾರೆ. ಟಿಎಂಸಿಯ ಗೂಂಡಾಗಳು ಬಿಜೆಪಿ ಅಭ್ಯರ್ಥಿ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಜನರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಲು ಅವಕಾಶ ನೀಡುತ್ತಿಲ್ಲ. ಇಷ್ಟಾದರೂ, ರಾಜ್ಯದಿಂದ ಟಿಎಂಸಿಯನ್ನು ಕಿತ್ತೆಸೆಯುವ ದಿಸೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಮತದಾನ ಮಾಡುತ್ತಿದ್ದಾರೆ ಎಂಬುದಾಗಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ಲೋಕಸಭೆ ಚುನಾವಣೆಯ ಪ್ರತಿಯೊಂದು ಹಂತದ ಮತದಾನದ ವೇಳೆಯೂ ಪಶ್ಚಿಮ ಬಂಗಾಳದಲ್ಲಿ (West Bengal) ಭಾರಿ ಹಿಂಸಾಚಾರ ಸಂಭವಿಸಿದೆ. ಮತಗಟ್ಟೆಗಳ ಬಳಿ ಜನ ಶಾಂತಿಯಿಂದ ಮತದಾನ ಮಾಡಲೂ ಸಾಧ್ಯವಾಗದ ಪರಿಸ್ಥಿತಿ (situation) ಎದುರಾಗಿದೆ.

spot_img
spot_img
- Advertisment -spot_img