ಜನಸ್ಪಂದನ ನ್ಯೂಸ್, ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ನಟ ದರ್ಶನ್, ರೌಡಿ ಶೀಟರ್ಗಳೊಂದಿಗೆ ಬಿಂದಾಸ್ ಆಗಿ ಟೀ ಸೇವಿಸುತ್ತಾ, ಸಿಗರೇಟ್ ಸೇವನೆ ಮಾಡುತ್ತಿರುವ ಫೋಟೋ ಸದ್ಯ ವೈರಲ್ ಆಗಿದೆ.
ಇದನ್ನು ಓದಿ : ದೀನ್ ದಯಾಳ್ ಸ್ಪರ್ಶ್ ಯೋಜನೆ : ವಿದ್ಯಾರ್ಥಿಗಳಿಗೆ ಸಿಗಲಿದೆ ರೂ. 6 ಸಾವಿರ ಸ್ಕಾಲರ್‌ಶಿಪ್.!
ಕಳೆದ 65 ದಿನಗಳಿಂದ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಸಿಗರೇಟ್ ಸೇದುತ್ತ ಕುಳಿತ್ತಿರುವ ಫೋಟೋವೊಂದು ವೈರಲ್ ಆಗಿದೆ.
ವೈರಲ್ ಫೋಟೋದಲ್ಲಿ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ಬೆಂಗಳೂರಿನ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಕುಳಿತುಕೊಂಡು ದರ್ಶನ್ ಸಿಗರೇಟ್ ಸೇದುತ್ತಿರುವುದು ಕಂಡುಬಂದಿದೆ.
ಪ್ಲಾಸ್ಟಿಕ್ ಚೇರ್‌ನಲ್ಲಿ ಕುಳಿತುಕೊಂಡಿರುವ ದರ್ಶನ್, ಒಂದು ಕೈಯಲ್ಲಿ ಟೀ ಕಪ್ ಮತ್ತು ಇನ್ನೊಂದು ಕೈಯಲ್ಲಿ ಸಿಗರೇಟ್ ಹಿಡಿದುಕೊಂಡಿದ್ದಾನೆ. ಆತನ ಜೊತೆಗೆ ಮತ್ತೊಬ್ಬ ಕೈದಿಯಾಗಿರುವ ಮ್ಯಾನೇಜರ್ ನಾಗರಾಜ್ ಕೂಡ ಇದ್ದಾನೆ.
ಫೋಟೋದಲ್ಲಿ ದರ್ಶನ್ ಕೂದಲು ತೆಗೆದಿರುವುದು ಕಂಡುಬಂದಿದೆ. ಮತ್ತೋರ್ವ ಕುಳ್ಳ ಸೀನ ಎಂದು ತಿಳಿದುಬಂದಿದೆ.
ಇದನ್ನು ಓದಿ : ಬಿಎಸ್ಎನ್ಎಲ್ ಗ್ರಾಹಕರಿಗೆ ಗುಡ್ ನ್ಯೂಸ್ : ʼಬಿಎಸ್ಎನ್ಎಲ್ʼನಿಂದ 4G ಸೇವೆ ಆರಂಭ ; ಎಂದಿನಿಂದ ಗೊತ್ತೇ.?
ಇನ್ನೂ ಈ ಫೋಟೋ ಹೇಗೆ ಹೊರಗಡೆ ಬಂತು ಎಂಬ ಕಥೆ ಕೂಡ ಕುತೂಹಲವಾಗಿದೆ.
ಜೈಲಿನಲ್ಲಿ ನಿಯಮಗಳನ್ನು ಮೀರಿ ಖೈದಿಗಳಿಗೆ ಮದ್ಯ ಸಿಗರೇಟ್ ಸಪ್ಲೈ ಮಾಡಲಾಗುತ್ತಿದೆ ಎಂದು ಹಲವು ಬಾರಿ ಆರೋಪ ಕೇಳಿ ಬಂದಿತ್ತು. ಇದಕ್ಕೆ ಸಾಕ್ಷ್ಯ ಎನ್ನುವಂತೆ ಈ ಪೋಟೋ ವೈರಲ್ ಆಗ್ತಿದೆ.