Thursday, April 25, 2024
spot_img
spot_img
spot_img
spot_img
spot_img
spot_img

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಪಿಎಸ್ಐ.!

spot_img

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಮತ್ತು ಪಿಎಸ್‌ಐ ಒಂದು ಲಕ್ಷ ರೂಪಾಯಿ ಲಂಚ (bribe) ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದವರು ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ವಜ್ರಮುನಿ ಮತ್ತು ಪಿಎಸ್‌ಐ ರಮ್ಯಾ ಎಂದು ತಿಳಿದು ಬಂದಿದೆ.

SSC Recruitment : ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್‌ (inspector) ವಜ್ರಮುನಿ ಹಾಗೂ ಸಬ್ ಇನ್ಸ್‌ಪೆಕ್ಟರ್‌ ರಮ್ಯ ಅವರು ಆರೋಪಿಯನ್ನು ವಶಕ್ಕೆ ಪಡೆದಿದ್ದರು.

ಆತನನ್ನು ತಮ್ಮ ವಶದಿಂದ ಬಿಡಲು ಐದು ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಇದರಲ್ಲಿ ಆಗಲೇ ಐವತ್ತು ಸಾವಿರ ರೂ. ಮೊದಲು ಪಡೆದುಕೊಂಡಿದ್ದರು. ಎರಡನೇ ಕಂತಾಗಿ ಒಂದು ಲಕ್ಷ ರೂ.ಗೆ ಬೇಡಿಕೆ (demand) ಇಟ್ಟಿದ್ದರು ಎನ್ನಲಾಗಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮಾಜಿ CM ವಿರುದ್ಧ FIR.!

ಈ ಕುರಿತು ವಂಚನೆ ಆರೋಪಿಯ ಕಡೆಯವರು ಎರಡನೇ ಕಂತು ಕೊಡುವ ಮುನ್ನ ಲೋಕಾಯುಕ್ತರಿಗೆ ಮಾಹಿತಿ ನೀಡಿದ್ದರು.

ದೂರಿನ ಹಿನ್ನೆಲೆ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ (Lokayukta) ಪೊಲೀಸರು ದಾಳಿ ನಡೆಸಿದ್ದಾರೆ.

spot_img
spot_img
spot_img
- Advertisment -spot_img