ಜನಸ್ಪಂದನ ನ್ಯೂಸ್, ಬೆಂಗಳೂರು : ಕಳ್ಳತನ ಪ್ರಕರಣದಲ್ಲಿ ಸೀಜ್ ಮಾಡಿದ್ದ 72 ಲಕ್ಷ ರೂ. ಹಣವನ್ನು ಪೊಲೀಸ್ ಇನ್ಸ್‌ಪೆಕ್ಟರ್ ದುರ್ಬಳಕೆ ಮಾಡಿಕೊಂಡಿದ್ದು, ಯಾರ ಕೈಗೂ ಸಿಗದೇ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಿಡದಿ ಠಾಣೆಯ ಇನ್‌ಸ್ಪೆಕ್ಟರ್ ಶಂಕರ್ ನಾಯ್ಕ್ ನಾಪತ್ತೆಯಾಗಿದ್ದು, ಹತ್ತು ದಿನಗಳಿಂದ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.
ಇದನ್ನು ಓದಿ : BSNL : 229 ರೂ. ರೀಚಾರ್ಜ್ ಪ್ಲಾನ್ಗೆ ಭಾರೀ ಡಿಮ್ಯಾಂಡ್; ದಿನಕ್ಕೆ 2GB ಡೇಟಾ ಸೇರಿ ಹಲವು ಬೆನಿಫಿಟ್ಸ್.!
ಶಂಕರ್ ನಾಯ್ಕ್ ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ ₹72 ಲಕ್ಷ ಜಪ್ತಿ ಮಾಡಿದ್ದರು. ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೇ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಶಂಕರ್ ಹಾಗೂ ಮಧ್ಯವರ್ತಿ ಲೋಕನಾಥ್ ವಿರುದ್ಧ ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಎಸಿಪಿ ಭರತ್ ರೆಡ್ಡಿ ದೂರು ಆಧರಿಸಿ FIR ದಾಖಲಾಗಿತ್ತು.
2023ರ ನವೆಂಬರ್‌ನಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಕಮಿಷನರ್ ಸಿಸಿಬಿಗೆ ವಹಿಸಿಸಲಾಗಿತ್ತು. ಪ್ರಕರಣ ರದ್ದು ಕೋರಿ ಶಂಕರ್ ನಾಯ್ಕ್ ಹೈಕೋರ್ಟ್ ಮೆಟ್ಟಲೇರಿದ್ದರು. ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿತ್ತು. ಆದರೆ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಸಿಬಿ ಮೇಲ್ಮನವಿ ಸಲ್ಲಿಸಿತ್ತು.
ಇದನ್ನು ಓದಿ : ವಿದ್ಯಾಭ್ಯಾಸದಲ್ಲಿ ಹಿನ್ನಡೆ : ಮಕ್ಕಳ ಮೊಬೈಲ್ ಒಡೆದು ಪುಡಿ ಮಾಡಿದ ಪೋಷಕರು ; ವಿಡಿಯೋ viral.!
ಈ ಹಿನ್ನೆಲೆಯನ್ನು ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ತಡೆಯಾಜ್ಞೆ ತೆರವುಗೊಳಿಸುತ್ತಿದ್ದಂತೆ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ತಲೆಮರೆಸಿಕೊಂಡಿದ್ದಾರೆ.