ಜನಸ್ಪಂದನ ನ್ಯೂಸ್, ಡೆಸ್ಕ್ : ಸಿಎಂ ಏಕನಾಥ್ ಶಿಂಧೆ ಬಣಕ್ಕೆ ಸೇರಿದ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಅವರ ಕಾರನ್ನು ಪೊಲೀಸ್ ಅಧಿಕಾರಿಯೊಬ್ಬರು ಸ್ವಚ್ಛಗೊಳಿಸಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದೀಗ ಟೀಕೆಗೆ ಗುರಿಯಾಗಿದೆ.
ಇದನ್ನು ಓದಿ : Job : 10ನೇ ತರಗತಿ ಆಗಿದ್ರೆ ಸಾಕು ; ಟಾಟಾ ಸಮೂಹದಿಂದ 4,000 ಮಹಿಳೆಯರಿಗೆ ಉದ್ಯೋಗಾವಕಾಶ.!
ಈ ವಿಡಿಯೋವನ್ನು ಶೇರ್ ಮಾಡಿರುವ ಮಾಜಿ ಕಾಂಗ್ರೆಸ್ ಶಾಸಕ ಹರ್ಷವರ್ಧನ್ ಸಪ್ಕಲ್, ಇದು ಪೊಲೀಸ್ ಸಿಬ್ಬಂದಿಯ ದುರ್ಬಳಕೆಯ ಕ್ಲಾಸಿಕ್ ಕೇಸ್, ಇದು ಪೊಲೀಸರಿಗೆ ಅವಮಾನ ಎಂದು ಅವರು ಬರೆದುಕೊಂಡಿದ್ದಾರೆ.
ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಅವರ ಕಾರನ್ನು ಪೊಲೀಸರು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದು ಆಡಳಿತ ಪಕ್ಷದ ಶಾಸಕರಿಗೆ ಪೊಲೀಸರ ಭದ್ರತಾ ಕರ್ತವ್ಯದ ಭಾಗವೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.
ಸದ್ಯ ರಾಜಕೀಯ ಮುಖಂಡರು ಪೊಲೀಸ್ ಅಧಿಕಾರಿಗಳನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದಾರೆ. ಸಮಾಜದಲ್ಲಿ ಪೊಲೀಸರಿಗೆ ವಿಶೇಷ ಗೌರವವಿದ್ದರೂ ರಾಜಕೀಯ ಮುಖಂಡರು ಪೊಲೀಸರನ್ನು ಕೈಗೊಂಬೆಯಂತೆ ಕಾಣುತ್ತಿದ್ದಾರೆ. ಅದನ್ನು ತಮಗೆ ಬೇಕಾದಂತೆ ಬಳಸುತ್ತಾರೆ. ಮನೆಗೆಲಸದಿಂದ ಹಿಡಿದು ಅಡುಗೆ ಮಾಡುವವರೆಗೆ ಎಲ್ಲವನ್ನೂ ಮಾಡುತ್ತಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.
ಇದನ್ನು ಓದಿ : Police ಪರೀಕ್ಷೆ ಬರೆಯಲು ಹೋದ ಪತಿ : ಬಾಯ್ ಫ್ರೆಂಡ್ ನನ್ನು ಮನೆಗೆ ಕರೆದ ಪತ್ನಿ; ಮುಂದೆನಾಯ್ತು ಗೊತ್ತಾ.?
ಉಪಾಹಾರ ಸೇವಿಸಿದ ಬಳಿಕ ಕಾರಿನಲ್ಲಿ ವಾಂತಿ ಮಾಡಿಕೊಂಡಿದ್ದಾರೆ. ಆಗ ಸ್ವತಃ ಪೊಲೀಸ್ ಅಧಿಕಾರಿಯೇ ಮುಂದೆ ಬಂದು ಕಾರನ್ನು ಸ್ವಚ್ಛಗೊಳಿಸಿದ್ದಾರೆ.
ಯಾರೂ ಪೊಲೀಸರಿಗೆ ಬಲವಂತ ಮಾಡಲಿಲ್ಲ ಎಂದು ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಪ್ರತಿಕ್ರಿಯಿಸಿದ್ದಾರೆ.
Outrageous!
This video shows a cop washing Shiv Sena MLA Sanjay Gaikwad's car, this is sheer misuse of police resources.
The priorities of these so called leaders need a hard look. pic.twitter.com/wel5g3hCkW
— BALA (@erbmjha) August 29, 2024