ಜನಸ್ಪಂದನ ನ್ಯೂಸ್, ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯ ಡಾ.ಅಭಿಷೇಕ್ ಅವರು ಆಪರೇಷನ್ ಥಿಯೇಟರ್ನಲ್ಲಿ (Operation Theatre) ಪ್ರೀ ವೆಡ್ಡಿಂಗ್ ಫೋಟೋಶೂಟ್ ನಡೆಸಿ ಯಡವಟ್ಟು ಮಾಡಿಕೊಂಡಿದ್ದಾರೆ.
ವೈದ್ಯ ಡಾ.ಅಭಿಷೇಕ್ ಅವರು ಭರಮಸಾಗರ ಮೂಲದ ಗುತ್ತಿಗೆ ಅಧಾರದಲ್ಲಿ ಕೆಲಸ ಮಾಡುತ್ತಿದ್ದು, ಡಾ. ಅಭಿಷೇಕ್ ಆಪರೇಷನ್ ಥಿಯೇಟರ್ ನಲ್ಲಿಯೇ ಫ್ರೀ ವೆಡ್ಡಿಂಗ್ ವಿಡಿಯೋ ಶೂಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನು ಓದಿ : Lokayukta : ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ಟೇಬಲ್.!
ಫ್ರೀ ವೆಡ್ಡಿಂಗ್ ವಿಡಿಯೋ ಶೂಟ್ ಮಾಡಿದ
ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದ್ದು, ವೈದ್ಯರ ನಡೆಗೆ ಸಾರ್ವಜನಿಕರ ವಲಯದಿಂದ ಅಸಮಾಧಾನ ವ್ಯಕ್ತವಾಗಿದೆ.
ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಫ್ರೀ ವೆಡ್ಡಿಂಗ್ ಶೂಟ್’ನಲ್ಲಿ ವ್ಯಕ್ತಿಯೋರ್ವನಿಗೆ ಆಪರೇಷನ್ ಮಾಡುತ್ತಿರುವಂತೆ ವಿಡಿಯೋ ಮಾಡಲಾಗಿದೆ. ಈ ವಿಡಿಯೋದಲ್ಲಿ ಆತನಿಗೆ ಭಾವಿ ಪತ್ನಿ ಸಹಾಯ ಮಾಡುವಂತೆ ಚಿತ್ರೀಕರಣ ಮಾಡಲಾಗಿದೆ.
ಓರ್ವ ವೈದ್ಯ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಡಾ.ಅಭಿಷೇಕ್ ಜೋಡಿ ಬಗ್ಗೆ ಹಲವರು ಬೇಸರ ಹೊರ ಹಾಕಿದ್ದಾರೆ.
ಕೆಲವೇ ಸೆಕೆಂಡ್ಗಳ ವಿಡಿಯೋ ಕೊನೆಗೆ ಆಪರೇಷನ್ ಮಾಡಿಸಿಕೊಳ್ಳುತ್ತಿರುವಂತೆ ಮಲಗಿದ್ದ ರೋಗಿ ಎದ್ದು ಕೂರುವುದನ್ನು ಕಾಣಬಹುದಾಗಿದೆ.
ಇದನ್ನು ಓದಿ : ಫೇಸ್‌ಬುಕ್ ಲೈವ್‌ನಲ್ಲಿ ಗುಂಡಿನ ದಾಳಿ ನಡೆಸಿ ರಾಜಕೀಯ ನಾಯಕನ ಹತ್ಯೆ ; ವಿಡಿಯೋ Viral.!
ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯ ಆಪರೇಷನ್ ಥಿಯೇಟರ್ಅನ್ನು ದುರ್ಬಳಕೆ ಮಾಡಿಕೊಂಡಿರುವುದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನೆ ಮಾಡ್ತಿದ್ದಾರೆ. (ಎಜೇನ್ಸಿಸ್)