Sunday, September 8, 2024
spot_img
spot_img
spot_img
spot_img
spot_img
spot_img
spot_img

ನಿತಿನ್​ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯಿಂದ ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿಂದು (ದಿ.12) ನಟೋರಿಯಸ್​ ಕ್ರಿಮಿನಲ್ ಓರ್ವ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಘೋಷಣೆ ಕೂಗಿದ ಪರಿಣಾಮ ಕೋಪಗೊಂಡ ವಕೀಲರು ಹಾಗೂ ಕೋರ್ಟಿನಲ್ಲಿದ್ದ ಸಾರ್ವಜನಿಕರು ವ್ಯಕ್ತಿಗೆ ಧರ್ಮದೇಟು ನೀಡಿದ್ದಾರೆ.

ಪೊಲೀಸರ ಆತನನ್ನು ರಕ್ಷಿಸಿ ಮತ್ತೆ ಜೈಲಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ. ಆರೋಪಿಯನ್ನು ಐಪಿಎಸ್​ ಅಧಿಕಾರಿ ಅಲೋಕ್ ಕುಮಾರ್​ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಆಗ ಆತ ಪಾಕಿಸ್ತಾನ ಜಿಂದಾಬಾದ್​ ಎಂದು ಕೂಗಿದ್ದ.

ಇದನ್ನು ಓದಿ : 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.!

ನಟೋರಿಯಸ್ ಪಾತಕಿ ಜಯೇಶ್ ಪೂಜಾರಿಯಿಂದ ಪಾಕಿಸ್ತಾನ ಪರ ಘೋಷಣೆ ಕೂಗಿವ. ಆತ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರಿಂದ ಪೆಟ್ಟು ಬಿದ್ದಿದೆ. ಕೋರ್ಟಿನಲ್ಲಿ ಆತನಿಗೆ ಪೆಟ್ಟು ಬಿದ್ದಿದೆ. ತಕ್ಷಣ ಆರೋಪಿಯನ್ನು ರಕ್ಷಣೆ ಮಾಡಿ ಹೊರ ಕರೆದುಕೊಂಡು ಬಂದ ಪೊಲೀಸರು, ಅಲ್ಲಿಂದ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಪುತ್ತೂರು ಮೂಲದ ಜಯೇಶ್ ಪೂಜಾರಿ ಈ ಹಿಂದೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಜೈಲಿನಿಂದ ಜೀವ ಬೆದರಿಕೆ ಹಾಕಿದ್ದ. ಹಿಂಡಲಗಾ ಜೈಲಿನಲ್ಲಿದ್ದುಕೊಂಡೆ ಜೀವ ಬೆದರಿಕೆ ಹಾಕಿದ್ದ. ಈ ಕೇಸ್ ಹಿನ್ನೆಲೆಯಲ್ಲಿ ಕೋರ್ಟ್ ಗೆ ಕರೆ ತರಲಾಗಿತ್ತು. ಆರೋಪಿ ಜಯೇಶ್​ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೂ ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಕೋರ್ಟ್ ನಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಎಂದು ಪಾಕ್ ಪರ ಘೋಷಣೆ ಕೂಗಿರುವುದಾಗಿ ಆತ ಹೇಳಿದ್ದಾನೆ.

ಇದನ್ನು ಓದಿ : ಶುಗರ್, ಕೊಲೆಸ್ಟ್ರಾಲ್, ಕ್ಯಾನ್ಸರ್ ಸೇರಿ 10 ರೋಗಗಳಿಗೆ ರಾಮಬಾಣ ಈ ಪಾನೀಯ.!

ನಿತಿನ್​ ಗಡ್ಕರಿಗೆ ಜೀವ ಬೆದರಿಕೆ :
ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಕಳೆದ ವರ್ಷ ಜನವರಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಮಾಡಿದ್ದನು. ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಮಾಡಿದ್ದನು. 10 ಕೋಟಿ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಪ್ರಕರಣವನ್ನು ದಾಖಲಿಸಿಕೊಂಡು ಮಹಾರಾಷ್ಟ್ರ ಪೊಲೀಸರು ಕರಣದ ತನಿಖೆ ನಡೆಸಿದ್ದರು.

ತನಿಖೆ ವೇಳೆ ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್​​ ಜನವರಿ 14 ಮತ್ತು ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ಸೆಲ್ ಫೋನ್ ಬಳಸಿ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದನು ಎಂದು ಪತ್ತೆಯಾಗಿತ್ತು. ಅಲ್ಲದೆ ಈತನಿಗೆ ಭಯೋತ್ಪಾದಕ ಅಫ್ಸರ್ ಪಾಷಾ ನಂಟಿರುವುದು ಪತ್ತೆಯಾಗಿತ್ತು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img