ಜನಸ್ಪಂದನ ನ್ಯೂಸ್, ಶಿವಮೊಗ್ಗ : ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸಲೂನ್ ಆ್ಯಂಡ್ ಸ್ಪಾ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ದಾಳಿ ವೇಳೆ ಮಹಿಳೆಯೋರ್ವಳನ್ನು ಬಂಧಿಸಲಾಗಿದ್ದು, ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ.
ಇದನ್ನು ಓದಿ : ವಿದ್ಯುತ್ ಇಲಾಖೆ (ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ) ಯಲ್ಲಿ ಖಾಲಿ ಇರುವ 1,000+ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಎಸ್ಪಿ ಮಿಥುನ್ ಕುಮಾರ್, ಅಡಿಷನಲ್ ಎಸ್ಪಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪರವರ ಮಾರ್ಗದರ್ಶನದಲ್ಲಿ, ಡಿವೈಎಸ್ ಪಿ ಸುರೇಶ್ ರವರ ಮೇಲ್ವಿಚಾರಣೆಯಲ್ಲಿ ಇನ್ಸ್ ಪೆಕ್ಟರ್ ಚಂದ್ರಕಲಾ ಮತ್ತು ಭರತ್ ಕುಮಾರ್ ರವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು.
ಸದ್ಯ ಬಂಧಿತ ಮಹಿಳೆ ಮೇಲೆ ಪ್ರಕರಣ ದಾಖಲಿಸಿ ತನಿಖೆ ಮುಂದುರೆಸಿದ್ದಾರೆ.