ಜನಸ್ಪಂದನ ನ್ಯೂಸ್, ಬೆಂಗಳೂರು : ಸಿಸಿಬಿ ಪೊಲೀಸರು, ಸರ್ಕಾರೇತರ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬೆಂಗಳೂರು ನಗರದ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದರು.
ಈ ವೇಳೆ 12 ಮಂದಿ ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
26 ಮಂದಿ ಏಜೆಂಟರು, ಐವರು ಗ್ರಾಹಕರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಇದನ್ನು ಓದಿ : 10th, 12th ಪಾಸ್ ಆದವರಿಗೆ ಗುಡ್ ನ್ಯೂಸ್: Airport ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
14 ರಿಂದ 17 ವರ್ಷ ವಯಸ್ಸಿನ 12 ಅಪ್ರಾಪ್ತ ಬಾಲಕಿಯರ ರಕ್ಷಣೆ ಮಾಡಲಾಗಿದೆ. ಸಂತ್ರಸ್ತ ಬಾಲಕಿಯರಲ್ಲಿ ವಿದೇಶಿ ಮಕ್ಕಳು ಸೇರಿದ್ದಾರೆ. ಬಾಲಕಿಯರನ್ನು ಸಮಾಜ ಕಲ್ಯಾಣ ಇಲಾಖೆಯ ಪುನರ್ವಸತಿ ಕೇಂದ್ರದ ಸುಪರ್ದಿಗೆ ನೀಡಲಾಗಿದೆ.
ವೇಶ್ಯಾವಾಟಿಕೆಗೆ ಬಾಲಕಿಯರ ಕಳ್ಳ ಸಾಗಣೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಆಧರಿಸಿ ಕೆಲವು ತಿಂಗಳಿಂದ ಕಾರ್ಯಾಚರಣೆ ನಡೆಸಲಾಗಿದೆ. ದಾಳಿಯ ವೇಳೆ ಪತ್ತೆಯಾದ ಮೂವರು ಬಾಂಗ್ಲಾದೇಶದ ಬಾಲಕಿಯರನ್ನು ವಾಪಸ್ ಕಳುಹಿಸಲು ಕ್ರಮ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ : SSLC, PUC ಪಾಸಾದವರಿಗೆ ಗುಡ್ ನ್ಯೂಸ್: KPTCL ನಲ್ಲಿ 2975 ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ.!
ಅಲ್ಲದೇ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ಬೆಂಗಳೂರು ನಗರದಲ್ಲಿ ವೇಶ್ಯಾವಾಟಿಕೆ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದ್ದಾರೆ. ಪೊಲೀಸ್ ನಿಯಂತ್ರಣ ಕೊಠಡಿ 112 ಗೆ ಅಥವಾ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.