ಜನಸ್ಪಂದನ ನ್ಯೂಸ್, ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ಗಣೇಶೋತ್ಸವ ಬಂದೋಬಸ್ತ್ ಮುಗಿಸಿ ಮನೆಗೆ ಬಂದ ವೇಳೆ ಹೃದಯಾಘಾತವಾಗಿ ಪಿಎಸ್‌ಐ ಒಬ್ಬರು ಮೃತಪಟ್ಟ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಯ ಹೆಚ್ಚುವರಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಸುರೇಶ್ ಖೋತ್ ಎನ್ನುವವರು ಸಾವನ್ನಪ್ಪಿದ್ದಾರೆ.
ಇದನ್ನು ಓದಿ : ಮೈಕ್ರೋಸ್ಕೋಪ್‌ನಲ್ಲಿ ನವಿಲು ಗರಿ ಹೇಗೆ ಕಾಣಿಸುತ್ತೆ.? Video ನೋಡಿದ್ರೆ wow ಅಂತೀರಾ.!
ಇವರು ರಾಯಭಾಗದಲ್ಲಿ ಗಣೇಶೋತ್ಸವದ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದರು.
ಈ ವೇಳೆ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಸುರೇಶರನ್ನು ಕೂಡಲೇ ಮಿರಜ್ ನಗರದ ಆಸ್ಪತ್ರೆಗೆ ರವಾನಿಸಲಾಯಿತು.
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಪಿಎಸ್‌ಐ ಸುರೇಶ್ ಖೋತ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.