Saturday, July 13, 2024
spot_img
spot_img
spot_img
spot_img
spot_img
spot_img

ಗನ್ ಪಾಯಿಂಟ್‌ ಇಟ್ಟು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಮೇಲೆ ಅತ್ಯಾಚಾರ ಎಸಗಿದ PSI.!

spot_img

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಕ್ಷಣೆ ಮಾಡಬೇಕಾದ ವ್ಯಕ್ತಿಯಿಂದ ರಕ್ಷಣೆ ಮಾಡುವವರ ಮೇಲೆ ಅತ್ಯಾಚಾರ  ಮಾಡಿರುವ ಹೀನ ಕೃತ್ಯದ ಘಟನೆ ತೆಲಂಗಾಣದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ತೆಲಂಗಾಣದ ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್ಸ್‌ಟೇಬಲ್‌ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಆರೋಪಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್  ಓರ್ವರನ್ನು ಬಂಧಿಸಲಾಗಿದೆ.

ಇದನ್ನು ಓದಿ : ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.!

ಇದೀಗ ಅಮಾನವೀಯ ಕೃತ್ಯ ಎಸೆದ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳಾ ಹೆಡ್ ಕಾನ್ಸ್‌ಟೇಬಲ್ ದೂರ ಆಧಾರ ಮೇಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮೇಲೆ ಹಿರಿಯ ಅಧಿಕಾರಿಗಳು ನಡೆಸಲಾಗಿದ್ದು, ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆರೋಪ ದೃಢಪಟ್ಟಿದೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಕಾಳೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓರ್ವ ಸಬ್ ಇನ್ಸ್‌ಪೆಕ್ಟರ್ ಈ ಕೃತ್ಯವನ್ನು ಮಾಡಿದ್ದಾರೆ ಎಂದು ಹೇಳಲಾಗಿದೆ. ಮಹಿಳಾ ಹೆಡ್ ಕಾನ್ಸ್‌ಟೇಬಲ್ ನೀಡಿದ ದೂರಿನಲ್ಲಿ ಜೂನ್ 16 ರಂದು ನೀರಾವರಿ ಯೋಜನೆಯ ವಸತಿ ಸೌಲಭ್ಯದ ಅತಿಥಿ ಕೊಠಡಿಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ : ಕಾಟನ್‌ ಕಾರ್ಪೋರೇಷನ್‌ನಲ್ಲಿ ಖಾಲಿ ಇರುವ ವಿವಿಧ 214 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಎಸ್‌ಐ ರಿವಾಲ್ವರ್ ತೋರಿಸಿ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ನಂತರ ಈ ವಿಚಾರವನ್ನು ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದಾನೆ ಎಂದು ಹೆಡ್ ಕಾನ್ಸ್‌ಟೇಬಲ್ ಆರೋಪಿಸಿದರು.

ಮಹಿಳಾ ಹೆಡ್ ಕಾನ್ಸ್‌ಟೇಬಲ್ ದೂರಿನ ಆಧಾರದ ಮೇಲೆ ಎಸ್‌ಐ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

spot_img
spot_img
- Advertisment -spot_img