ಜನಸ್ಪಂದನ ನ್ಯೂಸ್, ಬೆಂಗಳೂರು : ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿತ್ತು. ಕೆಲ ಜಿಲ್ಲೆಗಳಲ್ಲಿ ಮಾತ್ರ ಹಗುರ ಮಳೆ ಆಗುತ್ತಿದೆ ಅಷ್ಟೇ.
ಇದನ್ನು ಓದಿ : Special news : ಈ ನಾಲ್ಕು ರಾಶಿಯವರು ಪ್ರೀತಿಯಲ್ಲಿ ನೋವು ಅನುಭವಿಸುತ್ತಾರಂತೆ.!
ಆದರೆ ಹವಾಮಾನ ಇಲಾಖೆಯು ಇನ್ನೆರಡು ದಿನಗಳಲ್ಲಿ (ಸೆಪ್ಟೆಂಬರ್ 24) ಮತ್ತೆ ಭರ್ಜರಿ ಮಳೆ ಆರಂಭವಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಭಾಗದಲ್ಲಿ ಮತ್ತೆ ಮಳೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ರೈತ ಬೆಳೆಗಳಿಗೆ ಸಮಸ್ಯೆ ತಂದೊಡ್ಡಲಿದೆಯೇ ಎಂಬ ಅನುಮಾನ ಮೂಡಿದೆ. ಇನ್ನೂ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಹಾಗೂ ಒಣ ಹವಾಮಾನವಿದೆ ಎಂದು ವರಿದಿಯಾಗಿದೆ.
ಇದೇ ಸೆಪ್ಟೆಂಬರ್ 24ರಿಂದ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನು ಓದಿ : Strange tradition : ಭಾರತದ ಈ ಸಂತೆಯಲ್ಲಿ ಹುಡುಗಿಯರು ಮತ್ತು ಮಹಿಳೆಯರ ಮಾರಾಟ.!
ಅದರಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಕಲಬುರಗಿ, ಹಾವೇರಿ, ವಿಜಯಪುರ, ಯಾದಗಿರಿ, ದಾವಣಗೆರೆ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಪ್ಪಳದಲ್ಲಿ ಮತ್ತೆ ಮಳೆಯಾಗಲಿದೆ ಎಂದು ವರದಿಯಿಂದ ತಿಳಿದು ಬಂದಿದೆ.