Sunday, September 15, 2024
spot_img
spot_img
spot_img
spot_img
spot_img
spot_img
spot_img

ಮಾರ್ಚ್ 22ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಬರುವ ಮಾರ್ಚ್​ 22ರಿಂದ ಕರ್ನಾಟಕದ 12ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮೂರು ದಿನಗಳ (Three day) ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ರಾಜ್ಯಾದ್ಯಂತ  ವಿಪರೀತ ಸೆಕೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಬರುವ ಮಾರ್ಚ್​ 22ರಿಂದ ಮೂರು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ : ಕೇವಲ 10 ಲಕ್ಷದಲ್ಲಿ ನಿರ್ಮಾಣವಾಗಿರುವ 2BHK ಮನೆ ; ಕಡಿಮೆ ಬಡ್ಜೆಟ್ ನಲ್ಲಿ ಅಚ್ಚುಕಟ್ಟಾದ ಮನೆ ಕಟ್ಟಬೇಕು ಅನ್ನುವವರು ನೋಡಿ.!

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ಕಿತ್ತೂರು ಕರ್ನಾಟಕದ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನು ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಬೆಂಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನು ಓದಿ : ಬಾಯಾರಿಕೆಯಾಗದಿದ್ರೂ ನೀರು ಕುಡಿತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಕಾದ ಕಾವಲಿಯಂತಾಗಿದ್ದ ಮಲೆನಾಡಿನ ಕೆಲವು ಭಾಗಗಳಿಗೆ ಮಳೆರಾಯ (Rain) ತಂಪೆರೆದಿದ್ದಾನೆ. ಚಿಕ್ಕಮಗಳೂರಿನ  ಹಲವು ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ.ತಾಲೂಕಿನ ಮುತ್ತೋಡಿ ತಪ್ಪಲು, ಕೊಳಗಾಮೆ, ಮೇಲಿನ ಹುಲುವತ್ತಿ ಭಾಗಗಳು ಸೇರಿದಂತೆ ಹಲವು ಹಳ್ಳಿಗಳಲ್ಲಿ ಮಳೆಯಾಗಿದೆ.

ಮಳೆಗಾಗಿ ಆಕಾಶ ನೋಡುತ್ತಿದ್ದ ಕಾಫಿ ಬೆಳೆಗಾರರು ಹಾಗೂ ಅಡಿಕೆ, ಕಾಳು ಮೆಣಸು ಉಳಿಕೊಳ್ಳಲು ಪರದಾಡುತ್ತಿದ್ದ ರೈತರು, ಮಳೆ ಕಂಡು ಸಂತಸಕ್ಕೀಡಾಗಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img