Friday, October 18, 2024
spot_img
spot_img
spot_img
spot_img
spot_img
spot_img
spot_img

Weather : ಈ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ ಸಾಧ್ಯತೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಮುಂದುವರಿಯಲಿದೆ. ಅಕ್ಟೋಬರ್ 19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : South Western Railway ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.!

ಭಾರತೀಯ ಹವಾಮಾನ ಇಲಾಖೆಯು ಇಂದು (ಅಕ್ಟೋಬರ್ 16) ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿ ಇರಲಿದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ, ಕಲಬುರ್ಗಿ, ಕೊಪ್ಪಳದಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆ ಸುರಿಯಲಿದೆ.

ಇದನ್ನು ಓದಿ : ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲ್ಲ : High court

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದು ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಮಂಡ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನು ಓದಿ : Health : ಈ ಎಲೆಯ ನೆನೆಸಿದ ನೀರು ಕುಡಿಯುವುದರಿಂದ ಬೆಣ್ಣೆಯಂತೆ ಕರಗುವುದು ಹೊಟ್ಟೆಯ ಕೊಬ್ಬು.!

ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ವಿಜಯನಗರದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img