ಜನಸ್ಪಂದನ ನ್ಯೂಸ್, ಬೆಂಗಳೂರು : ಕೆಲವು ದಿನಗಳ ಕಾಲ ಬಿಡುವು ಪಡೆದುಕೊಂಡಿದ್ದ ಮಳೆ ಇದೀಗ ಮತ್ತೆ ರಾಜ್ಯದಲ್ಲಿ ಅಬ್ಬರಿಸುತ್ತಿದ್ದು, 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯು, ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದೆ.
ಇದನ್ನು ಓದಿ : ರಾಜ್ಯದ ಮತ್ತೋರ್ವ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ; ಶ್ರೀಗಳಿಂದ ಸ್ಪಷ್ಟೀಕರಣ.!
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ವಿಜಯಪುರ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.
ಉತ್ತರ ಒಳನಾಡು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನು ಓದಿ : ಸ್ಮಾರ್ಟ್‌ಫೋನ್ ನಿಮ್ಮ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂದು ತಿಳಿಯಲು ಈ Code ಬಳಸಿ.!
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.