Saturday, November 9, 2024
spot_imgspot_img
spot_img
spot_img
spot_img
spot_img
spot_img

ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ FIR ದಾಖಲು.!

WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಿರುದ್ಧ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಮಹಿಳೆ ಶಾಸಕ ವಿನಯ್ ಕುಲಕರ್ಣಿ ಅವರು 2022 ರಿಂದ ನನಗೆ ಪರಿಚಯವಾಗಿದ್ದರು. ಆಗಾಗ ವಿಡಿಯೋ ಕಾಲ್‌ನಲ್ಲಿ ಸಂಪೂರ್ಣ ಬೆತ್ತಲೆಯಾಗಿ ನನ್ನನ್ನು ನೋಡು ಎನ್ನುತ್ತಿದ್ದರು. 2022ರ ಆಗಸ್ಟ್‌ 24 ರಂದು ಸಂಜೆ 4 ಗಂಟೆಗೆ ಆಟೋದಲ್ಲಿ ಅವರ ಮನೆಗೆ ಹೋಗಿದ್ದೆ ಎಂದು ದೂರಿನಲ್ಲಿ ಸಂತ್ರಸ್ತೆ ತಿಳಿಸಿದ್ದಾರೆ.

ಇದನ್ನು ಓದಿ : ಆರೋಗ್ಯದ ದೃಷ್ಟಿಯಿಂದ ರಾತ್ರಿ ಒಳ ಉಡುಪು ಧರಿಸಿ ಮಲಗುವುದು ಸರಿಯೇ.?

ಮನೆಯಿಂದ ಕಾರಿನಲ್ಲಿ ಬಂದ ವಿನಯ್‌ ಕುಲಕರ್ಣಿ ನನನ್ನು ದೇವನಹಳ್ಳಿ ಸಮೀಪದ ಐವಿಸಿ ರೋಡ್‌ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದರು. ಕತ್ತಲೆ ಆದ ನಂತರ ಹಿಂದಿನ ಸೀಟ್‌ನಲ್ಲಿ ನನ್ನ ಹತ್ತಿರ ಕುಳಿತು ಅಸಭ್ಯ ವರ್ತನೆ ತೋರಿದ್ದಲ್ಲದೆ, ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಬಳಿಕ ಅಕ್ಟೋಬರ್‌ 2 ರಂದು ಗಾಂಧಿ ಜಯಂತಿಯಂದೂ ತಮ್ಮ ಮೇಲೆ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದೀಗ ಸಂತ್ರಸ್ತೆ ನೀಡಿದ ದೂರಿನ ಅನ್ವಯ ಸಂಜಯ್ ನಗರ ಪೊಲೀಸ್ ಠಾಣೆಯ ಪೊಲೀಸರು ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ, ಕಿರುಕುಳ, ಜೀವ ಬೆದರಿಕೆ, ವಂಚನೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.

ಇದನ್ನು ಓದಿ : Lokayukta raid : ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ.!

ಸದ್ಯ ದೂರು ನೀಡಿದ ಮಹಿಳೆಯನ್ನು ವೈದ್ಯಕೀಯ ತಪಾಸಣೆಗಾಗಿ ಕೆ ಸಿ ಜನರಲ್ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img