Friday, June 14, 2024
spot_img
spot_img
spot_img
spot_img
spot_img
spot_img

Rave-party-case : ಕರ್ತವ್ಯ ಲೋಪ ಹಿನ್ನೆಲೆ ; ಎಎಸ್‍ಐ ಸೇರಿ ಮೂವರನ್ನು ಸಸ್ಪೆಂಡ್.!

spot_img

ಜನಸ್ಪಂದನ ನ್ಯೂಸ್‌, ಬೆಂಗಳೂರು : ರೇವ್‌ ಪಾರ್ಟಿಗೆ (Rave party) ಸಂಬಂಧಪಟ್ಟಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿನ ಎಎಸ್ಐ ಸೇರಿ ಮೂವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ನಗರದ ಮೇ 19ರ ತಡರಾತ್ರಿ ನಗರದ ಎಲೆಕ್ಟ್ರಾನಿಕ್‌ ಸಿಟಿಯ (electronic city) ಜಿ.ಆರ್ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಗೆ (Rave party) ಸಂಬಂಧಪಟ್ಟಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿನ ಎಎಸ್ಐ ಸೇರಿ ಮೂವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ : ಅರ್ಜಿ ಸಲ್ಲಿಸಲು ಇಲ್ಲದೆ ಡೈರೆಕ್ಟ್‌ link.!

ಮೇ 19 ರ ಭಾನುವಾರ ರಾತ್ರಿ ಜಿ.ಆರ್ ಫಾರ್ಮ್ ಹೌಸ್‌ನಲ್ಲಿ ಬರ್ತ್ ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಮಧ್ಯರಾತ್ರಿ 3 ಗಂಟೆಗೆ ರೇಡ್‌ ಮಾಡಿದ್ದ ಸಿಸಿಬಿ ಪೊಲೀಸರು, ಡ್ರಗ್ಸ್ ಪತ್ತೆ ಮಾಡಿದ್ದರು. ಆ ಬಳಿಕ 103 ಜನರ ಬ್ಲಡ್ ಸ್ಯಾಂಪಲ್ ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ರಿಪೋರ್ಟ್ ಸಿಸಿಬಿ ಕೈ ಸೇರಿದ್ದು, ಕಿರುತೆರೆ ನಟಿ ಹೇಮಾ, ಆಶಿ ರಾಯ್‌ ಸೇರಿದಂತೆ 86 ಜನರಿಗೆ ಸಂಕಷ್ಟ ಎದುರಾಗಿದೆ.

ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಪಾರ್ಟಿಯಲ್ಲಿ ನೂರಾರು ಮಂದಿ ಡ್ರಗ್ಸ್ ಲೋಕದಲ್ಲಿ ಮಿಂದೆದ್ದಿದ್ದರು. ಈ ಬಗ್ಗೆ ಸಿಸಿಬಿ ಪೋಲೀಸರಿಗೆ ಸಿಕ್ಕ ಮಾಹಿತಿ ಸ್ಥಳೀಯ ಪೊಲೀಸರಿಗೆ ಇರಲಿಲ್ಲ.

TCSನಲ್ಲಿಉದ್ಯೋಗಾವಕಾಶ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಂದೇ ಅರ್ಜಿ ಸಲ್ಲಿಸಿ.!

ಇದೇ ವೇಳೆ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ಗಳಿಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್‌ ಬಾಲದಂಡಿ ಚಾರ್ಜ್ ಮೆಮೋ‌ ನೀಡಿದ್ದು, ಇಷ್ಟೆಲ್ಲ ಆಗುತ್ತಿದ್ದರೂ ನಿಮ್ಮ ಗಮನಕ್ಕೆ ಯಾಕೆ ಬಂದಿಲ್ಲ? ಇದಕ್ಕೆ ಕಾರಣ ನೀಡಿ ಎಂದು ವಿವರಣೆಯನ್ನು ಕೇಳಿದ್ದಾರೆ. ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ ಅವರ ಉತ್ತರ ಆಧರಿಸಿ ಅವರ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಠಾಣೆಯ ಎಸ್.ಬಿ. ಗಿರೀಶ್, ಎಎಸ್ಐ ನಾರಾಯಣ ಸ್ವಾಮಿ ಮತ್ತು ಬೀಟ್ ಕಾನ್ಸ್‌ಟೇಬಲ್ ದೇವರಾಜು ಅಮಾನತಾದವರು. ಸಿಸಿಬಿ ಪೊಲೀಸರಿಗೆ ಸಿಕ್ಕ ಮಾಹಿತಿ ಸ್ಥಳೀಯ ಪೊಲೀಸರಿಗೆ ಯಾಕೆ ಇರಲಿಲ್ಲ ಎಂದು ಪ್ರಶ್ನೆ ಮಾಡಲಾಗಿದ್ದು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

spot_img
spot_img
- Advertisment -spot_img