ಜನಸ್ಪಂದನ ನ್ಯೂಸ್, ಮೈಸೂರು : ಮೈಸೂರಿನ ಹೊರವಲಯದ ಕೆಆರ್ಎಸ್ ಹಿನ್ನೀರಿನಲ್ಲಿ ನೂರಕ್ಕೂ ಅಧಿಕ ಯುವತಿ- ಯುವತಿಯರಿಂದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಮೈಸೂರು ತಾಲ್ಲೂಕಿನ ಇಲವಾಲ ಠಾಣೆ PSI ಮಂಜುನಾಥ ನಾಯಕ್ರನ್ನು ಕರ್ತವ್ಯಲೋಪ ಆರೋಪದಡಿ ಅಮಾನತು ಮಾಡಿ ಎಸ್ಪಿ ವಿಷ್ಣುವರ್ಧನ್ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ : ರಾತ್ರಿ ವೇಳೆ ಈ ಲಕ್ಷಣಗಳು ಕಂಡುಬರುತ್ತಿವೆಯೇ.? ಅಪಾಯದ ಗಂಟೆ ಬಾರಿಸಿದಂತೆ.!
ಇಲವಾಲ ಠಾಣೆ ವ್ಯಾಪ್ತಿಯಲ್ಲಿ ಸೆ. 28ರಂದು ಮೈಸೂರು ತಾಲೂಕಿನ ಮೀನಾಕ್ಷಿಪುರದ ಬಳಿ ಅನುಮತಿ ಇಲ್ಲದೆ ನಡೆಯುತ್ತಿದ್ದ ಪಾರ್ಟಿ ಮೇಲೆ ಇಲವಾಲ ಠಾಣೆ PSI ಮಂಜುನಾಥ ನಾಯಕ್ ದಾಳಿ ಮಾಡಿದ್ದರು.
ಈ ರೇವ್ ಪಾರ್ಟಿಯಲ್ಲಿ ಯುವಕರು, ಯುವತಿಯರು ಪಾಲ್ಗೊಂಡಿದ್ದರು. ದಾಳಿ ವೇಳೆ ಪಿಎಸ್ಐ ಮೇಲೆ ಹಲ್ಲೆ ನಡೆಸಿ ಯುವಕರು ಎಸ್ಕೇಪ್ ಆಗಿದ್ದರು.
ಇದನ್ನು ಓದಿ : ಕಳ್ಳನನ್ನು ಬೆನ್ನುಟ್ಟುತ್ತಿದ್ದ police ಕಾರು ಅಪಘಾತ; ಮೂವರು ಪೊಲೀಸರಿಗೆ ಗಂಭೀರ ಗಾಯ.!
ನಂತರ ಮಂಜುನಾಥ ನಾಯಕ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಈಗ ದಿಢೀರ್ ಆಗಿ ಅವರನ್ನು ಅಮಾನತು ಮಾಡಿರುವುದು ಸಾರ್ವಜನಿಕರಲ್ಲಿ ಅಚ್ಚರಿಯನ್ನುಂಟು ಮಾಡಿದೆ.
ಪಿಎಸ್ಐ ಮಂಜುನಾಥ ನಾಯಕ್ ಆಸ್ಪತ್ರೆಗೆ ದಾಖಲಾದ ನಂತರ ಎಎಸ್ಪಿ ನಾಗೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಯುವಕರು, ಯುವತಿಯರನ್ನು ವಶಕ್ಕೆ ಪಡೆದು 64 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಇದನ್ನು ಓದಿ : Video : ಬೃಹದಾಕಾರದ ಹೆಬ್ಬಾವಿನ ಮೇಲೆ ಕುಳಿತು ಜಾರುಬಂಡೆಯಾಟ ಆಡಿದ ಪುಟ್ಟ ಮಕ್ಕಳು.!
ಪಾರ್ಟಿ ಆಯೋಜಿಸಿದ್ದ ಐವರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿತ್ತು. ಉಳಿದವರಿಗೆ ನೋಟಿಸ್ ನೀಡಲಾಗಿತ್ತು.
ಸದ್ಯ ಪಾರ್ಟಿಯಲ್ಲಿ ಯಾವುದೇ ಮಾದಕ ವಸ್ತು ಮಾದಕ ದ್ರವ್ಯ ಸಿಕ್ಕಿಲ್ಲ. ವಿವಿಧ ಮಾದರಿಯ ಬಿಯರ್ ಬಾಟಲ್ಗಳು, ಮದ್ಯ, ಸಿಗರೇಟ್ ಪತ್ತೆಯಾಗಿವೆ. ಕೆಲವರು ಕಾರುಗಳನ್ನು ಅಲ್ಲಿಯೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ವಶಕ್ಕೆ ಪಡೆದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಪರೀಕ್ಷೆಗೆ ಕಳುಹಿಸಿದ್ದಾರೆ.