Thursday, April 24, 2025
spot_img
HomeSports NewsRCB vs Panjab Kings ನಡುವೆ ನಾಳೆ ಮತ್ತೆ ಪಂದ್ಯ.!
spot_img
spot_img
spot_img

RCB vs Panjab Kings ನಡುವೆ ನಾಳೆ ಮತ್ತೆ ಪಂದ್ಯ.!

- Advertisement -
WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಕ್ರಿಕೆಟ್ : ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ತಂಡ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 5 ವಿಕೆಟ್​ಗಳಿಂದ ಮಣಿಸುವಲ್ಲಿ ಶ್ರೇಯಸ್ ಅಯ್ಯರ್ ಪಡೆ ಯಶಸ್ವಿಯಾಗಿದೆ.
ಈ ಮ್ಯಾಚ್​ನೊಂದಿಗೆ ಉಭಯ ತಂಡಗಳು ಐಪಿಎಲ್​ನ ಮೊದಲಾರ್ಥ ಪೂರ್ಣಗೊಳಿಸಿದೆ. ಇದೀಗ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೇ ಉಭಯ ತಂಡಗಳು ಮುಖಾಮುಖಿಯಾಗಲಿದೆ. ಅದು ಕೂಡ ನಾಳೆ (ಏಪ್ರಿಲ್ 20) ಎಂಬುದು ವಿಶೇಷ.

ಐಪಿಎಲ್​ ಮ್ಯಾನೇಜ್ಮೆಂಟ್ ರೂಪಿಸಿರುವ ವೇಳಾಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳಿಗೆ ಬ್ಯಾಕ್ ಟು ಬ್ಯಾಕ್ ಪಂದ್ಯಗಳನ್ನು ನಿಗದಿ ಮಾಡಲಾಗಿದೆ. ಅದರಂತೆ ಉಭಯ ತಂಡಗಳು ಭಾನುವಾರ ಮತ್ತೆ ಮುಖಾಮುಖಿಯಾಗಬೇಕಿದೆ.

ಇದನ್ನು ಓದಿ : ಕಾರಿಗೆ ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ.!

ಪಂದ್ಯ ಎಲ್ಲಿ, ಎಷ್ಟು ಗಂಟೆಗೆ?

ಈ ಪಂದ್ಯವು ಪಂಜಾಬ್ ಕಿಂಗ್ಸ್ ತಂಡದ ತವರು ಮೈದಾನದಲ್ಲಿ ನಡೆಯಲಿದೆ. ಅಂದರೆ ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಲಿದೆ.

ಏಪ್ರಿಲ್ 20 ರಂದು, ಭಾನುವಾರ ಸಂಜೆ 3.30 ಕ್ಕೆ ಈ ಮ್ಯಾಚ್ ಶುರುವಾಗಲಿದ್ದು, ಇದಕ್ಕಾಗಿ ಉಭಯ ತಂಡಗಳು ಶನಿವಾರ ಬೆಂಗಳೂರಿನಿಂದ ಚಂಡೀಗಢ್​ನತ್ತ ಪ್ರಯಾಣ ಬೆಳೆಸಲಿದೆ. ಅಂದರೆ ಉಭಯ ತಂಡಗಳ ನಡುವಣ ಮುಖಾಮುಖಿಗೆ ಕೇವಲ ಒಂದು ದಿನಗಳ ಬಿಡುವು ಮಾತ್ರ ಇದೆ.

ಇದನ್ನು ಓದಿ : ಹೆಬ್ಬಾವು ತಿಂದ ಹುಲಿರಾಯ ; ಮುಂದೆನಾಯ್ತು? ಈ Video ನೋಡಿ.!

ಇತ್ತ ಕಳೆದ ಪಂದ್ಯದಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಳಿನ (ಏ.20) ಪಂದ್ಯದಲ್ಲಿ ಗೆಲ್ಲುವ ಮೂಲಕ ಸೇಡು ತೀರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಪಂಜಾಬ್ ಪಡೆ ಜಯಭೇರಿ:

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಮುಖಾಮುಖಿಯಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡರು. ಮಳೆಯ ಕಾರಣ 14 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಅದರಲ್ಲೂ ಕೇವಲ 63 ರನ್​ಗಳಿಗೆ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಸ್ಪೋಟಕ ಇನಿಂಗ್ಸ್ ಆಡಿದ ಟಿಮ್ ಡೇವಿಡ್ 26 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 50 ರನ್ ಬಾರಿಸಿದರು. ಈ ಮೂಲಕ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿತು.

ಇದನ್ನು ಓದಿ : ಬೆಳಿಗ್ಗೆ ಮಜ್ಜಿಗೆ ಜೊತೆ ಇದನ್ನು ಸೇರಿಸಿ ಕುಡಿಯಿರಿ ; ಆಮೇಲೆ Magic ನೋಡಿ.!

ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 12.1 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 98 ರನ್ ಬಾರಿಸಿ ಐದು ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಮೊದಲಾರ್ಥವನ್ನು ಜಯದೊಂದಿಗೆ ಅಂತ್ಯಗೊಳಿಸಿದೆ. ಇದೀಗ ಭಾನುವಾರ ನಡೆಯಲಿರುವ ದ್ವಿತೀಯಾರ್ಧ ಮೊದಲ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಬೇಕಿದೆ.

WhatsApp Channel Join Now
Telegram Group Join Now
Instagram Account Follow Now
- Advertisement -
spot_img
spot_img
spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments