Tuesday, September 17, 2024
spot_img
spot_img
spot_img
spot_img
spot_img
spot_img
spot_img

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ ; state ಸರ್ಕಾರದ ಆದೇಶ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ನಿಗದಿತ ರಾಷ್ಟ್ರೀಯ ಹಬ್ಬ (National festival), ನಾಡಹಬ್ಬವನ್ನು ಮಾತ್ರ ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು. ಅದರ ಹೊರತಾಗಿ ಬೇರೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ.

ಈ ಕುರಿತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಸುತ್ತೋಲೆ ಹೊರಡಿಸಲಾಗಿದೆ. ಸುತ್ತೋಲೆಯನ್ನು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರ ಸೂಚನೆಯ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಘ ಹೊರಡಿಸಿದೆ.

ಇದನ್ನು ಓದಿ : Suicide : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್‌ಟೇಬಲ್ ; ಸ್ಥಿತಿ ಗಂಭೀರ.!

ಆ ಸುತ್ತೋಲೆಯಲ್ಲಿ 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರವೇ ಶಾಲೆ, ಕಾಲೇಜುಗಳಲ್ಲಿ ಆಚರಿಸಬೇಕು. ಧಾರ್ಮಿಕ ಹಬ್ಬ (religious festival) ಆಚರಿಸದಂತೆ ಸೂಚನೆ ನೀಡಲಾಗಿದೆ.

ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾಂತಿ, ಯುಗಾದಿ, ರಂಜಾನ್ ಸೇರಿದಂತೆ ವಿವಿಧ ಧಾರ್ಮಿಕ ಹಬ್ಬಗಳನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂಬುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನು ಓದಿ : Health : ಶೇಂಗಾವನ್ನು ನೆನಸಿಟ್ಟು ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು.!

ಒಂದು ವೇಳೆ ಈ ಆದೇಶ ಉಲ್ಲಂಘಿಸಿದರೆ ಪ್ರಾಂಶುಪಾಲರು, ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img