ಜನಸ್ಪಂದನ ನ್ಯೂಸ್, ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ (Mulki of Dakshina Kannada district) ಕಂದಾಯ ನಿರೀಕ್ಷಕರೊಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಗುರುವಾರ (ಡಿ.19) ನಡೆದಿದೆ.
ಮುಲ್ಕಿಯ ಕಂದಾಯ ನಿರೀಕ್ಷಕ (Inspector of Revenue) ಜಿ.ಎಸ್ ದಿನೇಶ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಆಸ್ತಿಗೆ ಸಂಬಂಧಿಸಿದ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರಿಸಲು (To include names of heirs in Pahani) ಮಾಡಲು 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ.
ಇದನ್ನು ಓದಿ : Health : ಈ ಹಣ್ಣಿನಲ್ಲಿದೆ ಮಧುಮೇಹ, ಕ್ಯಾನ್ಸರ್ ತಡೆಯುವ ಶಕ್ತಿ ; ಬೆಳಿಗ್ಗೆ ತಿಂದ್ರೆ ಆರೋಗ್ಯದಲ್ಲಿ ಚಮತ್ಕಾರ.!
ಈ ಕುರಿತು ದೂರುದಾರರು ಲೋಕಾಯುಕ್ತ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದರು ಎನ್ನಲಾಗಿದೆ.
ಈ ಹಿನ್ನಲೆ ಡಿ.19ರ ಗುರುವಾರ ಸುರತ್ಕಲ್ ಜಂಕ್ಷನ್ ಬಳಿ ದೂರುದಾರರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಕಂದಾಯ ನಿರೀಕ್ಷಕ ದಿನೇಶ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ತಂಡ ಅವರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನು ಓದಿ : ನಗ್ನವಾಗಿ ರೈಲು ಹತ್ತಿದ ವ್ಯಕ್ತಿ : ಶಾಕ್ ಆದ ಮಹಿಳಾ ಪ್ರಯಾಣಿಕರು ; ವಿಡಿಯೋ ವೈರಲ್.!
ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ (Mangalore Divisional Superintendent of Police) ಎಂ.ಎ ನಟರಾಜ ಅವರ ಮಾರ್ಗದರ್ಶನದಲ್ಲಿ (Guidance) ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ. ಕುಮಾರ್, ಪೊಲೀಸ್ ನಿರೀಕ್ಷಕ ಅಮಾನುಲ್ಲಾ. ಎ., ಸುರೇಶ್ ಕುಮಾರ್ ಪಿ., ಚಂದ್ರಶೇಖರ್ ಕೆ.ಎನ್. ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದರು ಎಂದು ತಿಳಿದು ಬಂದಿದೆ.
ಹಿಂದಿನ ಸುದ್ದಿ : ಛಲ ಬಿಡದೇ IAS ಅಧಿಕಾರಿಯಾದ ದಂತವೈದ್ಯೆ ಡಾ. ನೇಹಾ.!
ಜನಸ್ಪಂದನ ನ್ಯೂಸ್, ಡೆಸ್ಕ್ : UPSCಯು ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದು. ಕೆಲ ಅಭ್ಯರ್ಥಿಗಳು ಛಲ ಬಿಡದೆ, ತಮ್ಮ ಕಠಿಣ ಪರಿಶ್ರಮದಿಂದ (hard work) ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಸ್ ಆಗುವುದರ ಮೂಲಕ ತಮ್ಮ ಗುರಿಯನ್ನು ಸಾಧಿಸುತ್ತಾರೆ.
ಇದನ್ನು ಓದಿ : ವೃದ್ದರನ್ನು ಬಹಳ ಹೊತ್ತು ಕಾಯಿಸಿದ ಅಧಿಕಾರಿಗಳಿಗೆ ನಿಂತು ಕೆಲಸ ಮಾಡುವ ಶಿಕ್ಷೆ ನೀಡಿದ IAS ಆಫೀಸರ್.!
ಈ ರೀತಿ ಛಲ ಬಿಡದೇ UPSC ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ಡಾ. ನೇಹಾ ಅವರ ಯಶಸ್ಸಿನ ಕಥೆ (successful story) ಬಗ್ಗೆ ತಿಳಿಯೋಣ.
ಡಾ. ನೇಹಾ ಅವರು ಮೂಲತಃ ದೆಹಲಿಯವರಾಗಿದ್ದು, ದಂತವೈದ್ಯರಾಗಿ (Dentist) ಯಶಸ್ವಿ ವೃತ್ತಿ ಜೀವನವನ್ನು ನಡೆಸುತ್ತಿದ್ದರು. ಇವರು ತಮ್ಮ ತವರೂರಿನ ಪ್ರತಿಷ್ಠಿತ ಸಂಸ್ಥೆಯಿಂದ ದಂತ ವೈದ್ಯಕೀಯ ಪದವಿಯನ್ನು (degree in dentistry from a reputed institution) ಪಡೆದಿದ್ದರು.
ಬಳಿಕ ಕನ್ಸಲ್ಟೆಂಟ್ ಡೆಂಟಿಸ್ಟ್ ಆಗಿ ಕೆಲಸ ಮಾಡಿದರು. ತನ್ನ ವೃತ್ತಿಪರ ಯಶಸ್ಸಿನ ಹೊರತಾಗಿಯೂ, ನೇಹಾ ಅವರಿಗೆ ಯುಪಿಎಸ್ಸಿ ಪರೀಕ್ಷೆ ಬರೆಯಬೇಕೆಂಬ ಕನಸು ಇತ್ತು.
ಇದನ್ನು ಓದಿ : Video : ಮೆಟ್ರೋ ನಿಲ್ದಾಣದಲ್ಲಿ ಲಿಪ್ ಟು ಲಿಪ್ ಕಿಸ್ ಮಾಡುತ್ತ ನಿಂತ ಜೊಡಿ ; ಸಾರ್ವಜನಿಕರು ಶಾಕ್.!
ನೇಹಾ ಅವರು ತನ್ನ ಕೆಲಸದ ಜೊತೆಗೆ ಯುಪಿಎಸ್ಸಿಗಾಗಿ ತಯಾರಿ ನಡೆಸಿದರು. ಪ್ರತಿನಿತ್ಯ 4-5 ಗಂಟೆಗಳನ್ನು ಯುಪಿಎಸ್ಸಿ ಪರೀಕ್ಷೆಯ ಅಧ್ಯಯನಕ್ಕಾಗಿ ಮೀಸಲಿಡುತ್ತಿದ್ದರು. ಅಲ್ಲದೇ ವಾರಾಂತ್ಯದಲ್ಲಿ ಯುಪಿಎಸ್ಸಿ ಪರೀಕ್ಷೆಗಾಗಿ ಹೆಚ್ಚಿನ ಸಮಯ ಅಧ್ಯಯನದಲ್ಲಿ ತೊಡಗಿದರು.
ಮೊದಲ ಬಾರಿಗೆ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಲು ನೇಹಾ ಅವರಿಗೆ ಸಾಧ್ಯವಾಗಲಿಲ್ಲ. ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕೆಂಬ (Pass) ಗುರಿಯನ್ನು ಹೊಂದಿದ್ದ ಅವರು ಛಲ ಬಿಡದೆ, ಮತ್ತೆ ಪರೀಕ್ಷೆ ಬರೆದು ಪಾಸ್ ಆಗುವಲ್ಲಿ Success ಆಗುತ್ತಾರೆ. ಈ ಮೂಲಕ ಐಎಎಸ್ ಅಧಿಕಾರಿಯಾಗುವಲ್ಲಿ ಅವರು ಯಶಸ್ವಿಯಾಗುತ್ತಾರೆ.