Friday, October 4, 2024
spot_img
spot_img
spot_img
spot_img
spot_img
spot_img
spot_img

ಗಣೇಶ ವಿಸರ್ಜನೆ ವೇಳೆ ಗಲಭೆ ಕೇಸ್ ; ಪೊಲೀಸ್ ಇನ್ಸ್‌ಪೆಕ್ಟರ್ Suspend.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಪೊಲೀಸ್‌ ಅಧಿಕಾರಿ ಸಸ್ಪೆಂಡ್ ಆಗಿದ್ದಾರೆ.

ನಾಗಮಂಗಲ ‌ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Special news : ರಾತ್ರಿ ಮಲಗುವ ಮುನ್ನ ಒಂದು ಎಸಳು ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ.?

ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್‌ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೃಷ್ಟಿಯಾದ ಗಲಭೆ ರಾತ್ರಿ ವಿಕೋಪಕ್ಕೆ ಹೋಗಿತ್ತು. ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, 52 ಮಂದಿಯನ್ನು ಆರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಇದನ್ನು ಓದಿ : ನೀವು ಸಮೋಸಾ ಪ್ರಿಯರೇ? ಹಾಗಿದ್ರೆ ಈ Viral ವಿಡಿಯೋವನ್ನು ನೀವು ನೋಡಲೇಬೇಕು.!

ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಪೆಟ್ರೋಲ್‌ ಬಾಂಬ್‌ ಎಸೆದು ದಾಂಧಲೆ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಬುಧವಾರ ಸಂಜೆ ಅದ್ಧೂರಿ ಗಣಪತಿ ವಿಸರ್ಜನಾ ಮೆರವಣಿಗೆ ನಡೆಸುವ ವೇಳೆ ಈ ಘಟನೆ ನಡೆದಿತ್ತು.

ಇದನ್ನು ಓದಿ : ಸಾಯಲು ಬಂದು ರೈಲು ಹಳಿಯಲ್ಲೇ ನಿದ್ರೆಗೆ ಜಾರಿದ ಯುವತಿ; ಮುಂದೆನಾಯ್ತು ಈ Video ನೋಡಿ.!

ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದರು.

ಈ ವೇಳೆ ಹಿಂದು- ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿತ್ತು. ಬಳಿಕ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟರು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img