Saturday, July 19, 2025

Janaspandhan News

HomeCrime NewsCar - bike collision : ಒಂದೇ ಕುಟುಂಬದ 3 ಮಂದಿ ಸೇರಿ 7 ಜನರ...
spot_img
spot_img

Car – bike collision : ಒಂದೇ ಕುಟುಂಬದ 3 ಮಂದಿ ಸೇರಿ 7 ಜನರ ದುರ್ಮರಣ.!

- Advertisement -

ಜನಸ್ಪಂದನ ನ್ಯೂಸ್, ಡೆಸ್ಕ್‌ : ಮಧ್ಯರಾತ್ರಿಯಲ್ಲಿ ಕಾರು ಮತ್ತು ಮೋಟಾರ್‌ಸೈಕಲ್ ನಡುವೆ ಡಿಕ್ಕಿ (Car – bike collision) ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 3 ಮಂದಿ ಸೇರಿ 7 ಜನರ ದುರ್ಮರಣ ಹೊಂದಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ಪ್ರದೇಶದಲ್ಲಿ ಈ ಭೀಕರ ರಸ್ತೆ (Car – bike collision) ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲೀ ಒಂದೇ ಕುಟುಂಬದ ಮೂವರು ಸೇರಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನು ಓದಿ : Girl : ಶಾಲೆಯಿಂದ ಮನೆಗೆ ಹೊರಟ 10 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯಕ್ಕೆ ಯತ್ನ.!
ಹುಟ್ಟುಹಬ್ಬ ಮುಗಿಸಿ ಹಿಂತಿರುಗುವಾಗ ಕಾರು – ಬೈಕ್ ಡಿಕ್ಕಿ (Car – bike collision) :

ಸಂತ್ರಸ್ತರು ಹುಟ್ಟುಹಬ್ಬದ ಕಾರ್ಯಕ್ರಮದ ಮುಗಿಸಿ ಪುನಃ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಮಾರುತಿ ಆಲ್ಟೋ ಕಾರೊಂದು ಮೋಟಾರ್‌ಸೈಕಲ್‌ಗೆ ಡಿಕ್ಕಿ (Car – bike collision) ಹೊಡೆದಿದೆ. ಮೋಟಾರ್‌ಸೈಕಲ್‌ಗೆ ಡಿಕ್ಕಿ (Car – bike collision) ಹೊಡೆದ ರಭಸಕ್ಕೆ ಕಾರು ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದಿದೆ. ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಏಳು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕಾರು – ಬೈಕ್ ನಡುವಿನ ಡಿಕ್ಕಿ (Car – bike collision) ಯಲ್ಲಿ ಮೃತಪಟ್ಟವರ ವಿವರಗಳು ಇಂತಿದೆ :
  • ದೇವಿದಾಸ್‌ ಪಂಡಿತ್‌ ಗಂಗುರ್ಡೆ (28)
  • ಮನೀಷಾ ದೇವಿದಾಸ್‌ ಗಂಗುರ್ಡೆ (23)
  • ಭವೇಶ್‌ ದೇವಿದಾಸ್‌ ಗಂಗುರ್ಡೆ (2)
  • ಉತ್ತಮ್‌ ಏಕನಾಥ್‌ ಜಾಧವ್‌ (42)
  • ಅಲ್ಕಾ ಉತ್ತಮ್‌ ಜಾಧವ್‌ (38)
  • ದತ್ತಾತ್ರೇಯ ನಾಮದೇವ್‌ ವಾಘಮಾರೆ (45)
  • ಅನುಸೂಯಾ ದತ್ತಾತ್ರೇಯ ವಾಘಮಾರೆ (40)
ಇದನ್ನು ಓದಿ : https://janaspandhan.com/

ಕಾರು – ಬೈಕ್ ನಡುವಿನ ಡಿಕ್ಕಿ (Car – bike collision) ಯ ದುರ್ಘಟನೆಯಲ್ಲಿ ಸಾವಿಗೀಡಾದವರಲ್ಲಿ ದೇವಿದಾಸ್‌, ಮನೀಷಾ ಮತ್ತು 2 ವರ್ಷದ ಭವೇಶ್‌ ಒಂದೇ ಕುಟುಂಬದವರಾಗಿದ್ದಾರೆ. ಇನ್ನು ಮೃತರಲ್ಲಿ ಒಂದು ಮಗು ಸೇರಿ ಮೂವರು ಮಹಿಳೆಯರು, ಮೂವರು ಪುರುಷರು ಸೇರಿದ್ದಾರೆ.

ಗಾಯಗೊಂಡ ಬೈಕ್ ಸವಾರರು ; ಆಸ್ಪತ್ರೆಗೆ ದಾಖಲು :

ಅಪಘಾತಗೊಳ್ಳಗಾದ ಮೋಟಾರ್‌ಸೈಕಲ್‌ನಲ್ಲಿ ಇದ್ದ ಮಂಗೇಶ್‌ ಯಶವಂತ್‌ ಕುರ್ಘಾಡೆ (25) ಮತ್ತು ಅಜಯ್‌ ಜಗನ್ನಾಥ್‌ ಗೊಂಡ್‌ (18) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ನಾಸಿಕ್‌ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದ ಪೊಲೀಸರು  :

ಸುದಿ ತಿಳಿದ ಪೊಲೀಸರು ಅಪಘಾತದ ಸ್ಥಳಕ್ಕಾಗಮಿಸಿ, ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ಈ ವೇಳೆ ಚಾಲನಾ ವೇಗ, ಮದ್ಯ ಸೇವನೆ ಅಥವಾ ನಿರ್ಲಕ್ಷ್ಯ ಸಾಧ್ಯತೆಯನ್ನು ಪರಿಶೀಲಿಸಲಾಗುತ್ತಿದೆ.


Astrology : ಹೇಗಿದೆ ಗೊತ್ತಾ.? ಜುಲೈ 16 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 16 ರ ಬುಧವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ವಿವಾದಗಳಿಂದ ದೂರವಿರುವುದು ಉತ್ತಮ. ವೃತ್ತಿ ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುತ್ತವೆ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ. ನಿರುದ್ಯೋಗಿಗಳ ಶ್ರಮ ವ್ಯರ್ಥವಾಗುತ್ತದೆ. ಆರ್ಥಿಕವಾಗಿ ನೀರಿಕ್ಷಿತ ಫಲಿತಾಂಶಗಳು ಇರುವುದಿಲ್ಲ.

*ವೃಷಭ ರಾಶಿ*

ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಸ್ಥಿರಾಸ್ತಿ ವಿಷಯಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ ಸಿಗುತ್ತದೆ. ಸಂಗಾತಿಯೊಂದಿಗೆ ದೈವಿಕ ದರ್ಶನವನ್ನು ಪಡೆಯುತ್ತೀರಿ.

*ಮಿಥುನ ರಾಶಿ*

ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಸ್ನೇಹಿತರ ಸಹಾಯದಿಂದ ಸಾಲದ ಸಮಸ್ಯೆಗಳಿಂದ ಹೊರಬರುತ್ತೀರಿ. ಸಹೋದರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ವ್ಯವಹಾರಗಳು ಅನುಕೂಲಕರ ವಾತಾವರಣವನ್ನು ಹೊಂದಿರುತ್ತವೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.

*ಕಟಕ ರಾಶಿ*

ವೃತ್ತಿಪರ ವ್ಯವಹಾರಗಳು ಹೆಚ್ಚು ನೀರುತ್ಸಾಹ ಗೊಳಿಸುತ್ತವೆ. ಕೈಗೊಂಡ ಕಾರ್ಯಕ್ರಮಗಳು ಮಂದಗತಿಯಲ್ಲಿ ಸಾಗುತ್ತವೆ. ಕೌಟುಂಬಿಕ ವಿಚಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಉದ್ಯೋಗದ ವಾತಾವರಣವು ಅನುಕೂಲಕರವಾಗಿರುವುದಿಲ್ಲ. ಮಕ್ಕಳ ಆರೋಗ್ಯ ವಿಹಾಯಾದಲ್ಲಿ ಜಾಗ್ರತೆ ವಹಿಸಬೇಕು.

ಇದನ್ನು ಓದಿ : https://janaspandhan.com/
*ಸಿಂಹ ರಾಶಿ*

ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆಪ್ತ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಪರಿಶೀಲನೆ ಮಾಡಬೇಕು. ಕುಟುಂಬ ಸದಸ್ಯರ ವರ್ತನೆ ಚಿಂತಾಜನಕವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುತ್ತಿರುವ ಜವಾಬ್ದಾರಿಗಳಿಂದಾಗಿ,ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕನ್ಯಾ ರಾಶಿ*

ಯೋಜಿತ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಹಠಾತ್ ಆರ್ಥಿಕ ಲಾಭ ಉಂಟಾಗುತ್ತದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳು ದೊರೆಯುತ್ತವೆ. ವೃತ್ತಿಪರ ಉದ್ಯೋಗಗಳು ಕೆಲಸದ ಒತ್ತಡದಿಂದ ಪರಿಹಾರ ದೊರೆಯುತ್ತವೆ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ.

*ತುಲಾ ರಾಶಿ*

ನೇತ್ರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಮನೆಯಲ್ಲಿ ಕೆಲವರ ವರ್ತನೆಯಿಂದ ಮಾನಸಿಕ ಅಶಾಂತಿ ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಲಾಭ ಗಳಿಸಲು ಹೆಚ್ಚು ಶ್ರಮಿಸಬೇಕು. ಉದ್ಯೋಗ ವಿಚಾರಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.

*ವೃಶ್ಚಿಕ ರಾಶಿ*

ಆದಾಯದ ಮಾರ್ಗಗಳು ತೃಪ್ತಿಕರವಾಗಿರುತ್ತವೆ. ಮನೆಯ ಹೊರಗೆ ವಾತಾವರಣ ಅನುಕೂಲಕರವಾಗಿರುತ್ತದೆ. ಕುಟುಂಬದ ಸದಸ್ಯರ ಸಹಕಾರದಿಂದ ಮಹತ್ವದ ಕಾರ್ಯಕ್ರಮಗಳು ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳಿದ್ದರೂ ಪರಿಣಾಮಕಾರಿಯಾಗಿ ನಿರ್ವಹಿತ್ತೀರಿ.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!
*ಧನುಸ್ಸು ರಾಶಿ*

ಸಹೋದರರೊಂದಿಗಿನ ಸ್ಥಿರಾಸ್ತಿ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ವೃತ್ತಿಪರ ವ್ಯವಹಾರಗಳು ಹೆಚ್ಚು ನಿರುತ್ಸಾಹ ವಾತಾವರಣವನ್ನು ಹೊಂದಿರುತ್ತವೆ. ನಿರುದ್ಯೋಗಿಗಳು ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆಧ್ಯಾತ್ಮಿಕ ಸೇವೆಗಳತ್ತ ಗಮನ ಹರಿಸುತ್ತೀರಿ. ವಾಹನದಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವುದು ಒಳ್ಳೆಯದು.

*ಮಕರ ರಾಶಿ*

ಪ್ರಮುಖ ಕಾರ್ಯಗಳಲ್ಲಿ ಅಪ್ರಯತ್ನ ಕಾರ್ಯ ಸಿದ್ಧತೆ ಉಂಟಾಗುತ್ತದೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದಿ, ಮುಂದೆ ಸಾಗುತ್ತವೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಅಧಿಕಾರಿಗಳ ಕೃಪಾಕಟಾಕ್ಷದಿಂದ ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ.

*ಕುಂಭ ರಾಶಿ*

ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ. ಬಾಲ್ಯದ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತವೆ. ಭೂ ಮಾರಾಟ ಅನುಕೂಲಕರವಾಗಿ ನಡೆಯುತ್ತದೆ. ವ್ಯಾಪಾರಗಳಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಲಾಭವನ್ನು ಪಡೆಯುತ್ತೀರಿ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ.

*ಮೀನ ರಾಶಿ*

ಪ್ರಮುಖ ವ್ಯವಹಾರಗಳನ್ನು ಮುಂದೂಡುವುದು ಉತ್ತಮ. ಬಂಧು ಮಿತ್ರರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ಉದ್ಯೋಗಿಗಳಿಗೆ ಸಹೋದ್ಯೋಗಿಗಳೊಂದಿಗೆ ಸಮಸ್ಯೆ ಉಂಟಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

- Advertisement -
spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments