ಜನಸ್ಪಂದನ ನ್ಯೂಸ್, ಧಾರವಾಡ : ಹುಬ್ಬಳ್ಳಿ ನಗರದ ಕಿತ್ತೂರು ಚೆನ್ನಮ್ಮ ಹಾಗೂ ಸುತ್ತಮುತ್ತ ಫ್ಲೈಓವರ್ ಕಾಮಗಾರಿ ನಡೆಯುತ್ತಿದೆ.
ಇದನ್ನು ಓದಿ : ಯೂಟ್ಯೂಬ್ Video ನೋಡಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ; ಮುಂದೆನಾಯ್ತು ಗೊತ್ತಾ.?
ಈ ವೇಳೆ ಕೋರ್ಟ್ ವೃತ್ತ ಸಮೀಪ ಕರ್ತವ್ಯದಲ್ಲಿದ್ದ ಎಎಸ್‌ಐ ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದು ತೀವ್ರ ಗಾಯಗೊಂಡ ಘಟನೆ ನಡೆದಿದೆ.
ಉಪನಗರ ಪೊಲೀಸ್ ಠಾಣೆಯ ಎಎಸ್‌ಐ ನಾಭಿರಾಜ್ ದಯಣ್ಣವರ ತಲೆ ಮೇಲೆ ಕಬ್ಬಿಣದ ರಾಡ್ ಬಿದ್ದಿದೆ ಎಂದು ತಿಳಿದು ಬಂದಿದೆ.
ಫ್ಲೈ ಓವರ್ ಮೇಲೆ ಕಾರ್ಮಿಕರು ಕಬ್ಬಿಣದ ಸಲಾಕೆಗಳನ್ನು (ರಾಡ್) ಜೋಡಿಸುತ್ತಿದ್ದ ವೇಳೆ ಕೈಜಾರಿ ಉಪನಗರ ಪೊಲೀಸ್ ಠಾಣೆಯ ಎಎಸ್‌ಐ ತಲೆ ಮೇಲೆ ಕಬ್ಬಿಣದ ರಾಡ್ ಬಿದ್ದಿದೆ. ಪರಿಣಾಮ ತೀವ್ರ ರಕ್ತಸ್ರಾವ ಉಂಟಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನು ಓದಿ : ಬಾಯ್‌ಫ್ರೆಂಡ್ ಜೊತೆ ಓಡಿಹೋಗುತ್ತಿದ್ದ ಯುವತಿಗೆ ನೆನಪಾದ ತಂದೆ ; ಮುಂದೆನಾಯ್ತು? ಈ Video ನೋಡಿ.
ಇನ್ನೂ ಗುತ್ತಿಗೆದಾರರು ಕಾಮಗಾರಿ ಸ್ಥಳದಲ್ಲಿ ಯಾವುದೇ ರೀತಿಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲವೆಂದು ತಿಳಿದು ಬಂದಿದೆ.
ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಎಎಸ್‌ಐ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮತ್ತು ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದರು.