Wednesday, May 22, 2024
spot_img
spot_img
spot_img
spot_img
spot_img
spot_img

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ; ಪರಾರಿಯಾಗಲೆತ್ನಿಸಿದ ಆರೋಪಿಗೆ ಗುಂಡೇಟು ಕೊಟ್ಟ Police.!

spot_img

ಜನಸ್ಪಂದನ ನ್ಯೂಸ್‌, ಧಾರವಾಡ : ಪೋಕ್ಸೋ ಪ್ರಕರಣದ ಆರೋಪಿಯೋರ್ವ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆದರೆ ಈ ವೇಳೆ ಆರೋಪಿ ಹುಬ್ಬಳ್ಳಿಯ ಈಶ್ವರನಗರದ ಸದ್ದಾಂ ಹುಸೇನ್‌ನ ಎಡಗಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಸದ್ದಾಂ ಹುಸೇನ್​ ಚಾಕುವಿನಿಂದ ಹಲ್ಲೆ ಮಾಡಿದ್ದರಿಂದ ಸಿಪಿಐ ಮತ್ತು ಓರ್ವ ಪೊಲೀಸ್ ಕಾನ್ಸ್​ಟೇಬಲ್ ಗಾಯಗೊಂಡಿದ್ದು, ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಸಹ ಆಸ್ಪತ್ರೆ ದಾಖಲು ಮಾಡಲಾಗಿದೆ.

ಇದನ್ನು ಓದಿ : Health : ಜೀರಿಗೆ ನೀರು ಕುಡಿಯುವುದರಿಂದ ಏನಾಗುವುದು.?

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಗರ್ಭಿಣಿಯನ್ನಾಗಿಸಿದ ಸಂಬಂಧ ನವನಗರ ಪೊಲೀಸ್​ ಠಾಣೆಯಲ್ಲಿಯ ಎಪಿಎಂಸಿ ನಿವಾಸಿಯಾಗಿರುವ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿತ್ತು. ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸದ್ದಾಂ ಹುಸೇನ್​ ಪರಾರಿಯಾಗಿದ್ದನು.

ಆರೋಪಿಯನ್ನು ಪತ್ತೆಹಚ್ಚಲು ಟೀಂ ರಚಿಸಲಾಗಿತ್ತು. ಸುತ್ತಗಟ್ಟಿ ಗ್ರಾಮದ ಸಮೀಪ ಆರೋಪಿ ಇರುವ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಧಾರವಾಡ ವಿದ್ಯಾಗಿರಿ ಠಾಣೆಯ ಸಿಪಿಐ ಸಂಗಮೇಶ‌ ದಿಡಿಗನಾಳ ಮತ್ತು ತಂಡ ಸ್ಥಳಕ್ಕೆ ತೆರಳಿತ್ತು. ಆರೋಪಿ ಸದ್ದಾಂ ಹುಸೇನ್​ ಪೊಲೀಸ್​ ವಾಹನ ಹತ್ತುವಾಗ ಅಧಿಕಾರಿಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೆ ವಿದ್ಯಾಗಿರಿ ಪೊಲೀಸ್​ ಠಾಣೆಯ ಇನ್ಸ್​​​ಪೆಕ್ಟರ್ ಸಂಗಮೇಶ ಆರೋಪಿಯ ಎಡಗಾಲಿಗೆ ಗುಂಡು ಹಾರಿಸಿದ್ದಾರೆ.

ಆರೋಪಿತ ಅಪ್ರಾಪ್ತ ಜತೆ ಸಲುಗೆ ಬೆಳೆಸಿ ಪ್ರೀತಿಸುವಂತೆ ನಂಬಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಆಘಾತಕಾರಿ ವಿಷಯ ತಿಳಿಸಿದ್ದರು. ಮಗಳು ಗರ್ಭಿಣಿಯಾದ ಸುದ್ದಿ ತಿಳಿದು ಪೋಷಕರು ಕಂಗಾಲಾಗಿದ್ದರು.

ಇದನ್ನು ಓದಿ : ಸಂಭ್ರಮದಿಂದ ನಡೆಯುತ್ತಿದ್ದ marriage : ಮಂಟಪದಿಂದಲ್ಲೋ ವರನನ್ನೇ ಒದ್ದು ಹೊರ ಹಾಕಿದ ವಧು ; ಅಷ್ಟುಕ್ಕೂ ಕಾರಣವಾದ್ರು ಏನು.?

ಅಪ್ರಾಪ್ತ ಜತೆ ಸಲುಗೆ ಬೆಳೆಸಿ, ಪ್ರೀತಿಸುವಂತೆ ನಂಬಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಮನೆಯಲ್ಲಿ ಹೇಳಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಕಳೆದ ಮೂರ್ನಾಲ್ಕು ದಿನದಿಂದ ಬಾಲಕಿ ವಾಂತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಿದ್ದರು. ಆದರೂ ವಾಂತಿ ಕಡಿಮೆಯಾಗದಿ ದ್ದಾಗ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆ ವೇಳೆ ಬಾಲಕಿ ವಿಚಾರಿಸಿದಾಗ ಸದ್ದಾಂ ಹುಸೇನ್ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಪೋಷಕರು ದೂರು ದಾಖಲಿಸಿದ್ದಾರೆ.

ಇದರ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಹೀಗಾಗಿ ಯುವಕನ ವಿರುದ್ಧ ಹಿಂದುಪರ ಸಂಘಟನೆಗಳು ಆಕ್ರೋಶ ಹೊರಹಾಕಿ, ಆರೋಪಿಯನ್ನು ಕೂಡಲೇ ಬಂಧಿಸುವಂತೆ ಶುಕ್ರವಾರ ಸಂಜೆ ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. (ಎಜೇನ್ಸಿಸ್)

ಜನಸ್ಪಂದನ ನ್ಯೂಸ್‌, ಕಳಕಳಿ : ಮತದಾನ ಪ್ರತಿಯೊಬ್ಬ  ಭಾರತೀಯನ ಹಕ್ಕು” ಮತ್ತು “ಕರ್ತವ್ಯವಾಗಿರುತ್ತದೆ. ತಪ್ಪದೇ ಮತ ಚಲಾಯಿಸಿ ಯೋಗ್ಯ ಸಂಸದರನ್ನು ಆಯ್ಕೆ ಮಾಡಿ.

spot_img
spot_img
spot_img
- Advertisment -spot_img