Saturday, July 13, 2024
spot_img
spot_img
spot_img
spot_img
spot_img
spot_img

harassment : ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ.!

spot_img

ಜನಸ್ಪಂದನ ನ್ಯೂಸ್‌, ಬೆಂಗಳೂರು : ಪ್ರೌಢ ಶಾಲಾ ಶಿಕ್ಷಕನಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಂಗಳೂರು ನಗರದ ಕಮಲಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಕಳೆದ ಶನಿವಾರ (ದಿ.29) ಕಮಲಾನಗರದ ಶಾಲೆಯೊಂದರಲ್ಲಿ ಇಂತಹ ಅನಾಚಾರ ಮಾಡಿದ್ದಾನೆ ಎಂದು ಶಿಕ್ಷಕನ ಮೇಲೆ ಆರೋಪ ಕೇಳಿ ಬಂದಿದೆ.

ಇದನ್ನು ಓದಿ : ಮಗು ಬೇಕು ಅಂದ ಗಂಡ ; ಮೂರನೇ ಮದುವೆ ಮಾಡಿಸಿದ ಪತ್ನಿಯರು.!

ಶನಿವಾರ ಈ ಘಟನೆ ನಡೆದಿದ್ದು, ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಬಾಲಕಿಯ ತಂದೆ ಸೋಮವಾರ ಮುಖ್ಯ ಶಿಕ್ಷಕರಿಗೆ ವಿಷಯ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ತಂದೆ ತಮ್ಮ ಮಗಳ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಕಾಮುಕನ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನು ಓದಿ : 10 ಮತ್ತು 12 ನೇ ತರಗತಿ ಪಾಸ ಆದವರಿಗೆ ಯೂನಿಯನ್ ಬ್ಯಾಂಕ್‌ ನಲ್ಲಿ ಉದ್ಯೋಗವಕಾಶ.!

ಈ ಸಂಬಂಧ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜತೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಾಗಿದೆ.

ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಶಿಕ್ಷಕನ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. (ಎಜೇನ್ಸಿಸ್)

spot_img
spot_img
- Advertisment -spot_img