Thursday, September 19, 2024
spot_img
spot_img
spot_img
spot_img
spot_img
spot_img
spot_img

ರಾತ್ರಿ ಕಡಿಮೆ ನಿದ್ದೆ ಮಾಡುವವರಿಗೆ shocking ಸುದ್ದಿ..!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ನಾವು ಕೆಲಸ ಮತ್ತು ವೃತ್ತಿಗೆ ಬಹಳ ಪ್ರಾಮುಖ್ಯತೆ ನೀಡುತ್ತೇವೆ. ಅದರಂತೆ ನಿದ್ದೆಗೂ ಸಹ ಪ್ರಾಮುಖ್ಯತೆ ನೀಡಬೇಕು. ಅನೇಕರು ಮಾಡುವ ತಪ್ಪೆಂದರೆ ಬೇಗ ಮಲಗುವುದನ್ನು ಬಿಟ್ಟು ಹೆಚ್ಚು ಫೋನ್ ಮತ್ತು ಟಿವಿ ನೋಡುತ್ತಾರೆ.

ಆದರೆ ಸರಿಯಾಗಿ ನಿದ್ರೆ ಮಾಡದವರು ಮಧುಮೇಹದ ಅಪಾಯವನ್ನು ಹೊಂದಿರುತ್ತಾರೆ ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿವೆ.

ಇದನ್ನು ಓದಿ : 10/12 ನೇ ತರಗತಿ ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶ.!

ಮನುಷ್ಯನಿಗೆ ನಿದ್ರೆ ಬಹಳ ಮುಖ್ಯ. ಸರಿಯಾಗಿ ನಿದ್ದೆ ಮಾಡದಿದ್ದರೆ ದೀರ್ಘಕಾಲದ ಕಾಯಿಲೆಗಳು ಬರುವ ಅಪಾಯವಿದೆ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಒಂದು ದಿನ ಸರಿಯಾಗಿ ಊಟ ಮಾಡದಿದ್ದರೂ ಪರವಾಗಿಲ್ಲ ರಾತ್ರಿ ಸರಿಯಾಗಿ ನಿದ್ದೆ ಮಾಡದಿದ್ದರೆ ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳು ತಕ್ಷಣ ಗೊತ್ತಾಗುತ್ತದೆ. ಆಲಸ್ಯ, ಆಯಾಸ, ತಲೆನೋವು, ವಾಕರಿಕೆ, ತಲೆಸುತ್ತು, ಕಾಲು ಮತ್ತು ತೋಳು ಸೆಳೆತದಂತಹ ಲಕ್ಷಣಗಳು ಕಂಡುಬರುತ್ತವೆ.

ಇದನ್ನು ಓದಿ : ನಡು ಬೀದಿಯಲ್ಲೇ ಪುಟ್ಟ ಬಾಲಕನ ಮೇಲೆ ಮಂಗಗಳ ದಾಳಿ : ಸಹಾಯಕ್ಕೆ ಬಾರದ ಮಹಿಳೆಯರ ನಡೆಗೆ ನೆಟ್ಟಿಗರ ಆಕ್ರೋಶ ; Video ವೈರಲ್.!

ಪ್ರತಿಯೊಬ್ಬರಿಗೂ 8 ರಿಂದ 9 ಗಂಟೆಗಳ ನಿದ್ದೆ ಬೇಕು. ಕನಿಷ್ಠ 7 ಗಂಟೆಗಳ ಕಾಲ ಶಾಂತಿಯುತವಾಗಿ‌ ನಿದ್ರಿಸಬೇಕು. ಚಿಕ್ಕ ಮಕ್ಕಳು ಮತ್ತು ವೃದ್ಧರಿಗೆ ಹೆಚ್ಚು ನಿದ್ರೆ ಬೇಕು. ಬೆಳಗ್ಗೆ ಬೇಗ ಏಳುವುದು ಎಂದರೆ ರಾತ್ರಿ ಬೇಗ ಮಲಗಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತಿಳಿಸಿದೆ.

ಇತ್ತೀಚಿನ ವರ್ಷಗಳಲ್ಲಿ ಯುವ ಜನರು ಸೆಲ್‌ಫೋನ್‌ಗೆ ದಾಸರಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ವಿಡಿಯೋ, ವೆಬ್ ಸೀರಿಸ್ ನೋಡಿ ನಿದ್ದೆ ಕೆಡಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಸರಿಯಾದ ನಿದ್ರೆಯ ಕೊರತೆಯು ದೇಹದ ಮೇಲೆ ಹೆಚ್ಚಿನ ಒತ್ತಡವನ್ನು ಉಂಟು ಮಾಡುತ್ತದೆ.

ಇದನ್ನು ಓದಿ : ಹಳೆಯ ಹಾಡಿಗೆ 90 ವರ್ಷದ ಅಜ್ಜಿಯ ಮಸ್ತ್‌ ಮಸ್ತ್ ಸ್ಟೆಪ್ಸ್ ; ವಿಡಿಯೋ ನೋಡಿದ್ರೆ ವಾವ್ ಅನ್ನೋದು ಗ್ಯಾರಂಟಿ.!

ಅಲ್ಲದೇ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಆಹಾರ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದು ರಕ್ತ ಪರಿಚಲನೆಯ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಪ್ರಮಾಣವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಇದು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img