ಜನಸ್ಪಂದನ ನ್ಯೂಸ್, ಡೆಸ್ಕ್ : ಹಾಡು ಹಗಲೇ ಮಾವಿನಹಣ್ಣಿನ ಚೀಲವೆಂದು ಓರ್ವ ಮಹಿಳೆಯ ಶವ (Dead body) ಸಾಗಾಟ ಮಾಡುತ್ತಿರುವ ಬೆಚ್ಚಿ ಬೀಳಿಸುವ ಪ್ರಕರಣವೊಂದು ನಡೆದಿರುವ ಬಗ್ಗೆ ವರದಿಯಾಗಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಮಾನ್ಯ ಜನರು ಬೆಚ್ಚಿ ಬಿದ್ದಿದ್ದಾರೆ.
ಹೌದು, ಪಂಜಾಬ್‌ನ ಲುಧಿಯಾನ ನಗರದಲ್ಲಿ ಜನರಲ್ಲಿ ಆಘಾತ ಮೂಡಿಸಿರುವ ಘೋರ ಘಟನೆ ಬೆಳಕಿಗೆ ಬಂದಿದೆ. ಮಾವಿನಹಣ್ಣಿನ ಚೀಲವೆಂದು ಭಾವಿಸಿದ್ದ ಚೀಲಯಲ್ಲಿ 31 ವರ್ಷದ ಮಹಿಳೆಯ ಶವ (Dead body) ಪತ್ತೆಯಾಗಿದ್ದು, ಪೊಲೀಸರು ಕೊಲೆ ಆರೋಪದಡಿಯಲ್ಲಿ ಇಬ್ಬರು ಶಂಕಿತರನ್ನು ಹುಡುಕುತ್ತಿದ್ದಾರೆ.
ಘಟನೆ ವಿವರ : River bridge collapses ; 9 ಸಾವು, ಹಲವು ವಾಹನಗಳು ನದಿಯ ಪಾಲು.!
ಘಟನೆ ಜುಲೈ 10 ರಂದು ನಡೆದಿದೆ. ಇಬ್ಬರು ವ್ಯಕ್ತಿಗಳು ಬೈಕ್‌ನಲ್ಲಿ ಲುಧಿಯಾನ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದು, ಚೀಲವೊಂದನ್ನು ವಿಭಜಕದ ಮೇಲೆ ಎಸೆದಿದ್ದಾರೆ. ಚೀಲದ ವಿಲಕ್ಷಣತೆ ಹಾಗೂ ದುರ್ವಾಸನೆ ಗಮನಿಸಿದ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು.
ಇದನ್ನು ಓದಿ :
ಪೊಲೀಸರ ಆಗಮಿಸಿದ ನಂತರ ಚೀಲವನ್ನು ತೆರೆಯಲಾಗಿದ್ದು, ಅದರಲ್ಲಿ ಮಹಿಳೆಯ ಶವ (Dead body) ಪತ್ತೆಯಾಗಿದೆ. ಮೃತರನ್ನು ರೇಷ್ಮಾ (31) ಎಂದು ಗುರುತಿಸಲಾಗಿದೆ.

ಕಾಮೆರಾ ದೃಶ್ಯಾವಳಿ ಪತ್ತೆ :
ಘಟನೆಯ ನಂತರ ಪೊಲೀಸರು ‘ಸೇಫ್ ಸಿಟಿ’ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಶಂಕಿತರು ಸುನೆಟ್ ಗ್ರಾಮದಿಂದ ಮಹಿಳೆಯ ಶವ (Dead body) ವನ್ನು ಬೈಕ್‌ನಲ್ಲಿ ಸಾಗಿಸುತ್ತಿರುವುದು ದೃಢಪಟ್ಟಿದೆ. ಅವರು ಸುಮಾರು 3.7 ಕಿಲೋಮೀಟರ್ ದೂರವಿರುವ ಆರತಿ ಚೌಕ್‌ಗೆ ದೇಹವನ್ನು ತೆಗೆದುಕೊಂಡು ಹೋಗಿ ಅಲ್ಲಿಯ ವಿಭಜಕದ ಮೇಲೆ ಎಸೆದಿರುವುದು ದೃಶ್ಯಗಳಲ್ಲಿ ಸ್ಪಷ್ಟವಾಗಿದೆ.
ತನಿಖೆ ಪ್ರಗತಿಯಲ್ಲಿ :
ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆಯನ್ನು ಕೊಲೆ ಮಾಡಿದ್ದು, ನಂತರ ಶವ (Dead body) ವನ್ನು ಎಸೆಯಲು ಯತ್ನಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಯ ಸಂಬಂಧ ಲುಧಿಯಾನ ಪೊಲೀಸರು ಈಗಾಗಲೇ ಶೋಧ ಕಾರ್ಯ ಆರಂಭಿಸಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚುವ ನಿರೀಕ್ಷೆಯಿದೆ.
ಇದನ್ನು ಓದಿ : Belagavi horrific incident : ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಓರ್ವ ಗಂಭೀರ.!
ಇದೊಂದು ಮಾನವೀಯತೆಯನ್ನು ಪ್ರಶ್ನಿಸುವ ಘಟನೆ ಆಗಿದ್ದು, ಸಾರ್ವಜನಿಕರಲ್ಲಿ ಭಯ ಮತ್ತು ಆಕ್ರೋಶವನ್ನುಂಟು ಮಾಡಿದೆ.
ಮಹಿಳೆಯ ಶವ (Dead body) ದ ವಿಡಿಯೋ :
सड़ा आम है… बोलकर सड़क पर फेंका लड़की की लाश, लुधियाना में चौंकाने वाला मामला pic.twitter.com/9J8UWgvoJo
— RAJIEV (राजीव) (@mishrarajiv08) July 9, 2025
Astrology : ಹೇಗಿದೆ ಗೊತ್ತಾ.? ಜುಲೈ 11 ರ ದ್ವಾದಶ ರಾಶಿಗಳ ಫಲಾಫಲ.!
ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 11 ರ ಶುಕ್ರವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.
ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :
*ಮೇಷ ರಾಶಿ*
ಕೆಲವು ವಿಷಯಗಳಲ್ಲಿ ಮಕ್ಕಳು ನಿಮ್ಮ ಮಾತು ಒಪ್ಪುವುದಿಲ್ಲ. ದೂರ ಪ್ರಯಾಣದಲ್ಲಿ ವಾಹನ ತೊಂದರೆಗಳು ಎದುರಾಗುತ್ತವೆ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಕಂಡುಬಂದರೂ, ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ವೃತ್ತಿಪರ ವ್ಯವಹಾರಗಳು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ, ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ.
*ವೃಷಭ ರಾಶಿ*
ಕುಟುಂಬದ ಸದಸ್ಯರ ವರ್ತನೆಯಿಂದ ಮಾನಸಿಕ ಕಿರಿಕಿರಿಗಳು ಹೆಚ್ಚಾಗುತ್ತವೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ಪ್ರಮುಖ ವಿಷಯಗಳಲ್ಲಿ .ಆತುರದ ನಿರ್ಧಾರಗಳು ಕೂಡಿ ಬರುವುದಿಲ್ಲ. ಹಣಕಾಸಿನ ವ್ಯವಹಾರಗಳು ಸ್ವಲ್ಪ ನಿಧಾನವಾಗುತ್ತವೆ. ನಿರುದ್ಯೋಗಿಗಳ ಕಷ್ಟಗಳು ವ್ಯರ್ಥವಾಗುತ್ತವೆ. ವ್ಯಾಪಾರ ಉದ್ಯೋಗಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ.
*ಮಿಥುನ ರಾಶಿ*
ಹೊಸ ಪರಿಚಯಗಳಿಂದ ಆರ್ಥಿಕ ಲಾಭ ಉಂಟಾಗುತ್ತದೆ. ಇತರರೊಂದಿಗೆ ಜಾಗರೂಕರಾಗಿರಿ. ಸ್ವಲ್ಪ ಮಟ್ಟಿಗೆ ಹಣಕಾಸಿನ ಸಮಸ್ಯೆಗಳಿಂದ ಮುಕ್ತರಾಗುತ್ತೀರಿ. ಹಳೆಯ ಸಾಲಗಳಿಂದ ಮುಕ್ತಿ ದೊರೆಯುತ್ತದೆ. ಕುಟುಂಬ ಸದಸ್ಯರ ವಿರೋಧ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗದಲ್ಲಿ ಧನಾತ್ಮಕ ಫಲಿತಾಂಶಗಳಿರುತ್ತವೆ.
*ಕಟಕ ರಾಶಿ*
ದೂರದ ಸ್ಥಳಗಳಿಂದ ಅಪರೂಪದ ಮಾಹಿತಿ ದೊರೆಯುತ್ತದೆ. ಆದಾಯ ಅಷ್ಟಾಗಿ ಇರುವುದಿಲ್ಲ. ಮನೆಯ ಹೊರಗೆ ಒಂದು ವ್ಯವಹಾರದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತವೆ. ಬಾಲ್ಯದ ಗೆಳೆಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಉದ್ಯೋಗದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಿ.
ಇದನ್ನು ಓದಿ : River bridge collapses ; 9 ಸಾವು, ಹಲವು ವಾಹನಗಳು ನದಿಯ ಪಾಲು.!
*ಸಿಂಹ ರಾಶಿ*
ಹಠಾತ್ ಧನ ಲಾಭ ದೊರೆಯುತ್ತದೆ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಒಳ್ಳೆಯ ಶುಭ ಸುದ್ಧಿ ಇರುತ್ತದೆ. ಮನೆಯಲ್ಲಿ ಬಂಧು ಮಿತ್ರರೊಂದಿಗೆ ಸಂತೋಷದಿಂದ ಕಳೆಯುತ್ತೀರಿ. ಹೊಸ ವ್ಯಾಪಾರಗಳಿಗೆ ನಿಕಟ ಸ್ನೇಹಿತರಿಂದ ಹೂಡಿಕೆಗಳು ದೊರೆಯುತ್ತವೆ. ಸೋದರ ಸಂಬಂಧಿಗಳೊಂದಿಗಿನ ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಬಡ್ತಿ ಹೆಚ್ಚಾಗುತ್ತದೆ.
*ಕನ್ಯಾ ರಾಶಿ*
ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತವೆ. ಮಕ್ಕಳ ಉದ್ಯೋಗ ಪ್ರಯತ್ನಗಳು ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ನಿಮ್ಮ ಸುತ್ತಮುತ್ತಲಿನವರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಪಾಲುದಾರಿಕೆ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ.
*ತುಲಾ ರಾಶಿ*
ಪ್ರಮುಖ ವಿಷಯಗಳಲ್ಲಿ ಕುಟುಂಬದವರ ಸಹಾಯ ಸಹಕಾರಗಳು ದೊರೆಯುತ್ತವೆ. ಹಣಕಾಸಿನ ಪರಿಸ್ಥಿತಿಯು ಆಶಾದಾಯಕವಾಗಿರುತ್ತದೆ. ಅಗತ್ಯಕ್ಕೆ ಸಂಬಂಧಿಕರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಹೊಸ ವ್ಯವಹಾರಗಳನ್ನು ಪ್ರಾರಂಭಿಸುತ್ತೀರಿ. ದೈವಿಕ ಸೇವಾ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ.
*ವೃಶ್ಚಿಕ ರಾಶಿ*
ಕೈಗೊಂಡ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ. ಆಸ್ತಿ ವಿವಾದಗಳಲ್ಲಿ ಸಹೋದರರೊಂದಿಗೆ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ದೂರದ ಸಂಬಂಧಿಕರಿಂದ ಪ್ರಮುಖ ಸಮಾಚಾರಗಳನ್ನು ಸ್ವೀಕರಿಸಲಾಗುತ್ತದೆ. ಆರ್ಥಿಕ ಸ್ಥಿತಿಯು ಹಿಂದಿಗಿಂತ ಸುಧಾರಿಸುತ್ತದೆ. ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ.
ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?
*ಧನುಸ್ಸು ರಾಶಿ*
ವೃತ್ತಿಪರ ಉದ್ಯೋಗಗಳಲ್ಲಿ ವಿವಾದಗಳು ಬಗೆಹರಿಯುತ್ತವೆ. ಆಧ್ಯಾತ್ಮಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷವಾಗಿ ಪಾಲ್ಗೊಳ್ಳುತ್ತೀರಿ. ದೇವರ ಕೃಪೆಯಿಂದ ಯೋಜಿತ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರದಲ್ಲಿನ ಹೊಸ ಉತ್ಸಾಹದೊಂದಿಗೆ ಲಾಭ ಪಡೆಯುತ್ತೀರಿ. ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಪ್ರಯಾಣದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತವೆ.
*ಮಕರ ರಾಶಿ*
ಆರೋಗ್ಯ ವಿಷಯದಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯ. ಮನೆಯ ಹೊರಗಿನ ಕೆಲವು ಸನ್ನಿವೇಶಗಳು ಹೆಚ್ಚು ಕಿರಿಕಿರಿಯುಂಟುಮಾಡುತ್ತವೆ. ಕುಟುಂಬ ಸದಸ್ಯರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಉದ್ಯೋಗಿಗಳು ಅಧಿಕಾರಿಗಳೊಂದಿಗೆ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನ ಸಮಸ್ಯೆಗಳಿಂದ ಒತ್ತಡ ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ.
*ಕುಂಭ ರಾಶಿ*
ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಸ್ವಲ್ಪ ಪರಿಹಾರ ಸಿಗುತ್ತದೆ. ಪ್ರಯಾಣದ ಸಮಯದಲ್ಲಿ ಹೊಸ ಸ್ನೇಹಿತರ ಪರಿಚಯ ಹೆಚ್ಚಾಗುತ್ತದೆ. ಆರ್ಥಿಕ ವಾತಾವರಣ ಅನುಕೂಲಕರವಾಗಿರುತ್ತದೆ. ಗೃಹ ನಿರ್ಮಾಣ ವಿಚಾರಗಳು ಕಾರ್ಯರೂಪಕ್ಕೆ ಬರುತ್ತವೆ. ವ್ಯವಹಾರಗಳಲ್ಲಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಲಾಭವನ್ನು ಪಡೆಯುತ್ತೀರಿ.
*ಮೀನ ರಾಶಿ*
ಮನೆಯ ಹೊರಗೆ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ. ಹೊಸ ವ್ಯವಹಾರಗಳು ಯಶಸ್ವಿಯಾಗುತ್ತವೆ. ಸಹೋದರರ ಸಹಕಾರದಿಂದ ಹೊಸ ಕಾರ್ಯಕ್ರಮಗಳಿಗೆ ಚಾಲನೆ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಅಪ್ರಯತ್ನ ಕಾರ್ಯ ಸಿದ್ಧಿ ದೊರೆಯುತ್ತದೆ ಮತ್ತು ಆರ್ಥಿಕ ಪರಿಸ್ಥಿತಿಯು ಆಶಾದಾಯಕವಾಗಿರುತ್ತದೆ. ಪ್ರಯಾಣ ಮಾಡುವಾಗ ಜಾಗರೂಕರಾಗಿರಿ.