ಜನಸ್ಪಂದನ ನ್ಯೂಸ್, ಬೆಂಗಳೂರು : ಕರ್ನಾಟಕ ಹೈಕೋರ್ಟ್, ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ರದ್ದುಗೊಳಿಸಿದೆ.
ಮೊಕದ್ದಮೆಯ ವಿಚಾರಣೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ, ‘ಜೈ ಶ್ರೀರಾಮ್’ ಎಂದು ಕೂಗುವುದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ, ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದಿದೆ.
ಇದನ್ನು ಓದಿ : Special news : ಕಣ್ನೋಟದಲ್ಲೇ ಎದುರಿಗಿದ್ದವರ ಹೃದಯವನ್ನು ಗೆಲ್ಲುತ್ತಾರೆ ಈ ರಾಶಿಯವರು.!
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಕಡಬ ತಾಲೂಕಿನಲ್ಲಿ ಮಸೀದಿಗೆ ನುಗ್ಗಿದ ಇಬ್ಬರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು.
ಬೈಕ್‌ನಲ್ಲಿ ಬಂದ ವ್ಯಕ್ತಿಗಳು ರಾತ್ರಿ ಮಸೀದಿಯ ಆವರಣದೊಳಗೆ ನುಗ್ಗಿ ಘೋಷಣೆಗಳನ್ನು ಕೂಗಿದ್ದಾರೆ. ಘೋಷಣೆ ಶಬ್ದ ಕೇಳಿ ಹೊರಬಂದ ಮಸೀದಿಯ ಮೌಲ್ವಿಯನ್ನು ನೋಡಿದ ತಕ್ಷಣ ಅವರು ಅಲ್ಲಿಂದ ಪರಾರಿಯಾಗಿದ್ದರು.
ಈ ಘಟನೆ ಮಸೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದು, ಹಲವು ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದರು.
ಇದನ್ನು ಓದಿ : Health : ಈ ಎಲೆಯ ನೆನೆಸಿದ ನೀರು ಕುಡಿಯುವುದರಿಂದ ಬೆಣ್ಣೆಯಂತೆ ಕರಗುವುದು ಹೊಟ್ಟೆಯ ಕೊಬ್ಬು.!
ಪೊಲೀಸರ ಕ್ರಮವನ್ನು ಪ್ರಶ್ನಿಸಿ ಒಬ್ಬ ಆರೋಪಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಸೆಕ್ಷನ್ 295ರ ಅಡಿ ಪ್ರಕರಣ ದಾಖಲಿಸುವಷ್ಟು ತಪ್ಪು ನಡೆದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿತು.
ಇವರ ವರ್ತನೆಯಿಂದ ಸಾರ್ವಜನಿಕ ಜೀವನಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ. ಅಲ್ಲದೇ ಧಾರ್ಮಿಕ ನಂಬಿಕೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಹೈಕೋರ್ಟ್, ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣದಡಿ ಕ್ರಮ ಕೈಗೊಳ್ಳುವ ಕುರಿತ ಅರ್ಜಿಯನ್ನು ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.